ಸಮಗ್ರ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವಿದ್ಯಮಾತಾ ಅಕಾಡೆಮಿ ಸುಳ್ಯ ಶಾಖೆಯ ಉದ್ಘಾಟನೆಯು ನ. 9ರಂದು ವಿದ್ಯಾಮಾತಾ ಅಕಾಡೆಮಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ಸುಳ್ಯ ಟಿಎಪಿಸಿಎಂಎಸ್ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೆಪ್ಟೆಂಬರ್ 28 ರಂದು ಶುಭಾರಂಭಗೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ನ. 8ರಂದು ಪ್ರವೇಶಾತಿಯನ್ನು ಪಡೆದುಕೊಂಡಿರುವ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಿಗಾಗಿ ತರಬೇತಿಯನ್ನು ಪ್ರಾರಂಭಿಸಲಾಯಿತು.
ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೆಶ್ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ವಂದಿಸಿದರು.