Ad Widget .

ಇಂದು ಟಿಪ್ಪು ಜಯಂತಿ/ ಶ್ರೀರಂಗಪಟ್ಟಣದಲ್ಲಿ ಬಿಗುಭದ್ರತೆ

ಸಮಗ್ರ ನ್ಯೂಸ್: ಸರಕಾರದಿಂದ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲದಿದ್ದರೂ, ಇಂದು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿದೆ. ಟಿಪ್ಪು ವಕ್ಫ್ ಎಸ್ಟೇಟ್‍ನಿಂದ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದ್ದು, ರಾಜ್ಯದ ಹಲವು ಜಿಲ್ಲೆಗಳಿಂದ ಜನರು ಭಾಗವಹಿಸುವ ನಿರೀಕ್ಷೆ ಇದೆ.

Ad Widget . Ad Widget .

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಕೋಮು ಸಂಘರ್ಷದ ಭೀತಿ ಎದುರಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 11ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ತಿಳಿಸಿದ್ದಾರೆ. ಮೆರವಣಿಗೆ ಹಾಗೂ ಪ್ರತಿಭಟನೆಗೆ ನಿರ್ಬಂಧ ವಿಧಿಸಲಾಗಿದ್ದು, ಬ್ಯಾನರ್, ಧ್ವನಿವರ್ಧಕ, ಪಟಾಕಿ ಹಾಗೂ ಡಿಜೆ ಬಳಕೆಯನ್ನು ನಿಷೇಧಿಸಲಾಗಿದೆ.

Ad Widget . Ad Widget .

ಸರ್ಕಾರದ ವತಿಯಿಂದ ನಡೆಸುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲಿ ನಿಷೇಧಿಸಲಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೂ ನಿಷೇಧ ಹಿಂಪಡೆದಿಲ್ಲ. ಇದರ ನಡುವೆ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿದೆ.

Leave a Comment

Your email address will not be published. Required fields are marked *