ಸಮಗ್ರ ನ್ಯೂಸ್: ಪ್ರತಿ ಆರು ತಿಂಗಳಿಗೊಮ್ಮೆ ಶೇಕಡಾ 5ರಷ್ಟು ಹಾಲಿನ ದರ ಏರಿಕೆಗೆ ಅವಕಾಶ ನೀಡಬೇಕು ಮತ್ತು ಹಾಲಿನ ದರ ಏರಿಕೆಯನ್ನು ಕರ್ನಾಟಕ ಹಾಲು ಮಹಾಮಂಡಳಕ್ಕೆ ಅನುಮತಿ ನೀಡಬೇಕು ಎಂದು ರಾಜ್ಯ ಪಶು ಸಂಗೋಪನಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕು ಎಂದು ಕೋರಲಾಗಿದೆ.
ಕೆಎಂಎಫ್ ಹಾಲಿನ ಪುಡಿ ಪೂರೈಸುತ್ತಿರುವ ಕ್ಷೀರಭಾಗ್ಯ ಯೋಜನೆಯಲ್ಲಿ ಪ್ರತಿ ಕೆ.ಜಿ. ಹಾಲಿನ ಪುಡಿಗೆ 300 ರೂಪಾಯಿಗಳನ್ನು ನೀಡಲಾಗುತ್ತಿದ್ದು, ಇದರಿಂದ ಕೆಎಂಎಫ್‍ಗೆ ನಷ್ಟವಾಗುತ್ತಿದೆ. ಆದ್ದರಿಂದ ಈ ಮೊತ್ತವನ್ನು 400 ರೂಪಾಯಿಗೆ ಏರಿಸಬೇಕು ಎಂದು ಮನವಿ ಮಾಡಲಾಗಿದೆ.