Ad Widget .

ರಾಜ್ಯ ಬಿಜೆಪಿಗೆ ಹೊಸ ಸಾರಥಿ| ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ

ಸಮಗ್ರ ನ್ಯೂಸ್: ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕರನ್ನಾಗಿ ನೇಮಕ ಮಾಡಲಾಗಿದೆ.

Ad Widget . Ad Widget .

ಈ ಮೂಲಕ ಕಳೆದ ಹಲವು ವರ್ಷಗಳಿಂದ ರಾಜ್ಯಾಧ್ಯಕ್ಷರಾಗಿದ್ದ ಸಂಸದ ನಳಿನ್ ಕುಮಾರ್ ಅವರಿಗೆ ಸ್ಥಾನದಿಂದ ಬಿಡುಗಡೆಗೊಳಿಸಲಾಗಿದೆ.

Ad Widget . Ad Widget .

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪಕ್ಷ ಸಂಘಟನೆ ಮತ್ತು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ. ಬಿಜೆಪಿಗೆ ನೆಲೆಯೇ ಇಲ್ಲದ ಕ್ಷೇತ್ರಗಳಲ್ಲಿಯೂ ಉಪಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ವಿಜಯೇಂದ್ರ ಪಾತ್ರ ಮಹತ್ವದ್ದು. ಅವರ ಸಂಘಟನಾ ಶಕ್ತಿಯನ್ನು ಗುರುತಿಸಿ ನಳಿನ್ ಕುಮಾರ್ ಕಟೀಲು ಅವರಿಂದ ತೆರವಾದ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Leave a Comment

Your email address will not be published. Required fields are marked *