ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಚ್ಚಿ ಕೊಲೆಗೈದು ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ.

Ad Widget ... ..

ಕೊಲೆಯಾದವರನ್ನು ಹಸೀನಾ ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21), ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿದೆ. ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಡಿವೈಎಸ್ಪಿ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

Leave a Comment

Your email address will not be published. Required fields are marked *