Ad Widget .

ರಾಜಧಾನಿಯಲ್ಲಿ ಮತ್ತೊಮ್ಮೆ ಅಗ್ನಿ ಅವಘಡ…

ಸಮಗ್ರ ಸಮಾಚಾರ: ಬೆಂಗಳೂರಿನಲ್ಲಿ ದಿನೇ ದಿನೇ ಬೆಂಕಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತಿದೆ. ನಿನ್ನೆ ತಡರಾತ್ರಿ ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಧಗಧಗನೇ ಹೊತ್ತಿ ಉರಿದಿದೆ.

Ad Widget . Ad Widget .

ನಾಲ್ಕು ಅಂತಸ್ತಿನ ಈ ಕಟ್ಟಡದಲ್ಲಿ ಕೆಳ ಹಾಗೂ ಮೊದಲ ಮಹಡಿಯಲ್ಲಿ ಫರ್ನಿಚರ್ಸ್ ಶೋರೂಂ ಇತ್ತು. ಎರಡನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ಇತ್ತು. ಇನ್ನೂ ಮೂರು ಮತ್ತು ನಾಲ್ಕನೇ ಮಹಡಿಯಲ್ಲಿ ಸಾಫ್ಟ್​​ವೇರ್ ಕಂಪನಿಯೊಂದು ಕಾರ್ಯ ನಿರ್ವಹಿಸುತ್ತಿತ್ತು. ನಾಲ್ಕು ಅಂತಸ್ತಿಗೂ ಬೆಂಕಿ ವ್ಯಾಪಿಸಿದ್ದು, ಕಟ್ಟಡದಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ.
ಶಾಟ್​ ಸರ್ಕ್ಯೂಟ್​ನಿಂದ ಬೆಂಕಿ ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ಭಾನುವಾರ ಮತ್ತು ದೀಪಾವಳಿ ರಜೆ ಇರೋ ಕಾರಣದಲ್ಲಿ ಕಟ್ಟಡದಲ್ಲಿ ಜನರು ಇರಲಿಲ್ಲ ಎನ್ನಲಾಗಿದೆ. ಯಾವುದೇ ಪ್ರಾಣಹಾನಿಯ ವರದಿಯಾಗಿಲ್ಲ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಅಗ್ನಿಶಾಮಕದಳದವರು ರಕ್ಷಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *