ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಗೆ ಉಚಿತ ಪ್ರವಾಸ..! ಅಮಿತ್ ಶಾ ಭರವಸೆ

ಸಮಗ್ರ ಸಮಾಚಾರ: ಮಧ್ಯಪ್ರದೇಶ ಚುನಾವಣೆಗೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನತೆಗೆ ಗುಡ್​ ನ್ಯೂಸ್ ನೀಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ಶ್ರೀರಾಮನ ಉಚಿತ ದರ್ಶನ ವ್ಯವಸ್ಥೆಯ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರಕ್ಕೆ ಹಂತ ಹಂತವಾಗಿ ಮಧ್ಯಪ್ರದೇಶದ ಜನರನ್ನು ಕರೆದುಕೊಂಡು ಹೋಗಲಾಗುವುದು ಎಂದು ಹೇಳಿದ್ದಾರೆ.

Ad Widget ... ..

ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ. ರಾಷ್ಟ್ರೀಯ ನಾಯಕರೂ ಕೂಡ ಚುನಾವಣಾ ಕದನಕ್ಕೆ ದುಮುಕಿದ್ದಾರೆ. ಇಂದು ನಡೆದ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಯೋಧ್ಯೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

Ad Widget

ತಾವೂ ಬಿಜೆಪಿ ಅಧ್ಯಕ್ಷರಾಗಿದ್ದಾಗ ರಾಮಮಂದಿರ ನಿರ್ಮಾಣ ದಿನಾಂಕ ಯಾವಾಗ ಎಂದು ರಾಹುಲ್ ಗಾಂಧಿ ಪದೇ ಪದೇ ಕೇಳುತ್ತಿದ್ದರು. ಈಗ ನಾವು 2024 ರ ಜನವರಿ 22 ರಂದು ಅಯೋಧ್ಯೆಯಲ್ಲಿ ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಿದ್ದೇವೆ ಎಂದು ಹೇಳುತ್ತಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಅಲ್ಲಿದ್ದ ಬಿಜೆಪಿ ಮುಖಂಡರೊಬ್ಬರು ತಕ್ಷಣ ಪ್ರತಿಕ್ರಿಯಿಸಿ, ಹಾಗಾದರೆ ನಾವು ದುಡ್ಡು ಹೊಂದಿಸಿಕೊಳ್ಳೋದ ಎಂದು ಕೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಾ, ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ, ರಾಜ್ಯದ ಜನತೆಗೆ ಅಯೋಧ್ಯೆಗೆ ಉಚಿತ ಭೇಟಿ ನೀಡುತ್ತೇವೆ. ಹಂತ ಹಂತವಾಗಿ ಜನರನ್ನು ಅಯೋಧ್ಯೆಗೆ ಕರೆದೊಯ್ಯಲಾಗುವುದು. ಈ ಭರವಸೆಯನ್ನು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ಘೋಷಿಸಿದ್ದೇವೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *