Ad Widget .

ವಿದ್ಯುತ್ ಕಳ್ಳತನ ಆರೋಪ| ಮಾಜಿ ಸಿಎಂ ಎಚ್.ಡಿ.ಕೆ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ FIR ದಾಖಲಾಗಿದೆ. ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೆಪಿ ನಗರ ನಿವಾಸಕ್ಕೆ ಎಚ್‌ಡಿ ಕುಮಾರಸ್ವಾಮಿ ಅವರು ವಿದ್ಯುತ್ ಅಲಂಕಾರ ಮಾಡಿದ್ದರು. ಇದಕ್ಕೆ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು. ಇದು ಕಾನೂನು ಬಾಹಿರವಾಗಿದ್ದು, ಈ ಹಿನ್ನೆಲೆ 2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135 ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Ad Widget . Ad Widget . Ad Widget .

ವಿದ್ಯುತ್ ಕಳವು ಆರೋಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದರು ಹಾಗೂ ಪರಿಶೀಲನೆ ನಡೆಸಿದ್ದರು. ನಂತರ ಕೇಸ್ ದಾಖಲಾಗಿದೆ.

ಕಾಯ್ದೆಯಡಿ ದಂಡ ಕಟ್ಟುವುಕ್ಕೆ ಅಥವಾ 6 ತಿಂಗಳ ಜೈಲು ಶಿಕ್ಷೆ ವಿಧಿಸುವುದಕ್ಕೂ ಅವಕಾಶ ಇದೆ. ಸದ್ಯ ಸ್ವತಃ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ತಪ್ಪಾಗಿರುವುದನ್ನು ಒಪ್ಪಿಕೊಂಡಿರುವ ಕಾರಣಕ್ಕೆ ದಂಡದಲ್ಲಿಯೇ ಪ್ರಕರಣ ಮುಕ್ತಾಯವಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *