Ad Widget .

ಕಾಶ್ಮೀರದಲ್ಲಿ ಭಾರೀ ಅನಾಹುತ| ಕಂದಕಕ್ಕೆ ಬಸ್ ಉರುಳಿ 36 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಕನಿಷ್ಠ 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ.

Ad Widget . Ad Widget .

ಕಿಶ್ತ್ವಾರದಿಂದ ಜಮ್ಮುಗೆ ಪ್ರಯಾಣಿಸುತ್ತಿದ್ದ ಬಸ್, ಅಸ್ಸಾರ್ ಪ್ರದೇಶದಲ್ಲಿನ ತೃಣಾಲ್ ಬಳಿ ಕಡಿದಾದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದರಿಂದ ಈ ಘಟನೆ ನಡೆದಿದೆ. ಬಸ್‌ನಲ್ಲಿ 55 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

Ad Widget . Ad Widget .

ಘಟನೆಯ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *