Ad Widget .

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶ್ರೀಗೆ ಬಿಡುಗಡೆ ಭಾಗ್ಯ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Ad Widget . Ad Widget .

ಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷದ ಡಿಸೆಂಬರ್​ನಿಂದ ಶ್ರೀಗಳು ಚಿತ್ರದುರ್ಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

Ad Widget . Ad Widget .

ನವೆಂಬರ್ 8ರಂದು ಒಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ನೀಡಿದ್ದರೂ, ಇನ್ನೊಂದು ಪ್ರಕರಣದ ವಿಚಾರಣೆ ಬಾಕಿ ಉಳಿದಿದ್ದ ಕಾರಣ ಮುರುಘಾ ಶರಣರ ಬಿಡುಗಡೆಯಾಗಿರಲಿಲ್ಲ. ಇದೀಗ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ಶ್ರೀಗಳನ್ನು ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದು, ಇಂದು ಜೈಲಿನಿಂದ ಹೊರಬಂದಿದ್ದಾರೆ.

ಚಿತ್ರದುರ್ಗ ಜೈಲಿನಿಂದ ಶ್ರೀಗಳು ನಿನ್ನೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಿತ್ರದುರ್ಗದ ಕೋರ್ಟ್​ಗೆ ಹಾಜರಾಗಿದ್ದರು. ಬುಧವಾರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ಹೈಕೋರ್ಟ್​ ವಿಧಿಸಿದ್ದ ಷರತ್ತುಗಳನ್ನು ಹಾಗೂ ದಾಖಲೆಗಳನ್ನು ಪರಿಶೀಲಿಸಿದ ನಂತರ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಶ್ರೀಗಳನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತ್ತು. ಆದರೆ ಆದೇಶದ ಪ್ರತಿ ತಡವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿದ ಕಾರಣ ಬುಧವಾರ ಶ್ರೀಗಳನ್ನು ಬಿಡುಗಡೆ ಮಾಡಿರಲಿಲ್ಲ. ಹಾಗಾಗಿ ಇಂದು ಶ್ರೀಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

Leave a Comment

Your email address will not be published. Required fields are marked *