ಸಮಗ್ರ ನ್ಯೂಸ್: ಬಿಸಿಸಿಐ ನಡೆಸುವ ಅಂಡರ್-19 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ಕೆಆರ್ ಎಸ್ ಕ್ರಿಕೆಟ್ ಅಕಾಡೆಮಿಯ ತೇಜಸ್ವಿನಿ ಉದಯ್ ಆಯ್ಕೆಯಾಗಿದ್ದಾರೆ. ಇವರು ಆರಂಭಿಕ ಆಟಗಾರ್ತಿ ಮತ್ತು ಮಧ್ಯಮ ವೇಗಿ ಆಗಿದ್ದು,ಭರವಸೆಯ ಬ್ಯಾಟಿಂಗ್ ಮೂಲಕ ರಾಜ್ಯ ತಂಡಕ್ಕೆ ಪ್ರವೇಶ ಮಾಡಿದ್ದಾರೆ.
5ನೇ ವಯಸ್ಸಿನಲ್ಲಿ ಬಿಳಿ ಜೆರ್ಸಿ ತೊಟ್ಟು ಕ್ರಿಕೆಟ್ ಆಡಬೇಕೆಂದು ಹಠಹಿಡಿದ ತೇಜಸ್ವಿನಿಗೆ ಬ್ಯಾಟ್ ಹಿಡಿಯಲು ಹೇಳಿಕೊಟ್ಟು ಶುಭ ಹಾರೈಸಿದ್ದು ಭಾರತದ ಮಾಜಿ ಆಟಗಾರ ಸೈಯದ್ ಕಿರ್ಮಾನಿ ಎಂಬುದು ವಿಶೇಷ.
ವಿವಿಧ ಪಂದ್ಯಗಳಲ್ಲಿ 350ಕ್ಕೂ ಹೆಚ್ಚು ರನ್ ಗಳಿಸಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ತೇಜಸ್ವಿನಿಯ ಆಯ್ಕೆ ಕರಾವಳಿಯ ಯುವ ಮಹಿಳಾ ಕ್ರಿಕೆಟಿಗರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಸಾಮಾನ್ಯವಾಗಿ ರಾಜ್ಯ ತಂಡಕ್ಕೆ ಬೆಂಗಳೂರು ವಲಯದ ಆಟಗಾರರು ಆಯ್ಕೆಯಾಗುವುದೇ ಹೆಚ್ಚು ಉಡುಪಿ ಜಿಲ್ಲೆಯಿಂದ ಮಹಿಳಾ ಕ್ರಿಕೆಟಿಗರೊಬ್ಬರು ರಾಜ್ಯವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿ. ಇವರು ಕಟಪಾಡಿಯ ಶ್ರೀಶೈಲ ಹಾಗೂ ಉದಯ್ ಕುಮಾರ್ ದಂಪತಿ ಪುತ್ರಿ.