ಜೆಡಿಎಸ್‍ನಲ್ಲಿ ಮುಂದುವರಿದ ಭಿನ್ನಮತ/ ಸಿ ಎಂ ಇಬ್ರಾಹಿಂ ಅಮಾನತು

ಸಮಗ್ರ ನ್ಯೂಸ್: ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ಮುಂದುವರೆದಿದ್ದು, ಇದೀಗ ಜೆಡಿಎಸ್‍ನ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನಲೆಯಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ಸಿ ಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ.

Ad Widget ... ..

ಜೆಡಿಎಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮಾಡಿಕೊಂಡಿರುವ ಒಪ್ಪಂದ ಒಮ್ಮತದ ನಿರ್ಣಯವಾಗಿದ್ದರೂ, ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿರುತ್ತಾರೆ. ಇದು ಪಕ್ಷ ವಿರೋಧಿ ಚಟುವಟಿಕೆ ಆಗಿರುತ್ತದೆ ಎಂದು ದೇವೇಗೌಡರು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *