Ad Widget .

ವಿಪಕ್ಷ ನಾಯಕರಾಗಿ ಆರ್. ಅಶೋಕ್/ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಣಯ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿಯ ಹಿರಿಯ ಮುಖಂಡ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿಯ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Ad Widget . Ad Widget .

ಚುನಾವಣೆ ನಡೆದು ಹಲವು ಸಮಯ ಕಳೆದರೂ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆದಿರಲಿಲ್ಲ. ವಿಧಾನ ಸಭೆಯ ಮೊದಲ ಅಧಿವೇಶನ ವಿಪಕ್ಷ ನಾಯಕನಿಲ್ಲದೇ ನಡೆದುಹೋಗಿತ್ತು.

Ad Widget . Ad Widget .

ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಇದೀಗ ಮಾಜಿ ಸಚಿವ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಇಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *