ಸಮಗ್ರ ನ್ಯೂಸ್: ರಾಷ್ಟ್ರಾದ್ಯಂತ ಸುದ್ದಿ ಮಾಡುತ್ತಿರುವ ಡೀಪ್‌ಫೇಕ್ ವಿರುದ್ಧ ಬೆಂಗಳೂರು ಪೊಲೀಸರು ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂತಹ ವಿಡಿಯೋಗಳಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯವಾಣಿಯೊಂದನ್ನು ತೆರೆದು, ಅದಕ್ಕೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರು ನಗರ ಪೋಲೀಸರು ಈ ಕುರಿತು ಟ್ವೀಟ್ ಮಾಡಿದ್ದು, ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಡೀಪ್ ಫೇಕ್ ಗೆ ಒಳಗಾಗಿದ್ದಲ್ಲಿ, 1930 ಗೆ ಕರೆಮಾಡಿ ಬೆಂಗಳೂರು ನಗರ ಪೊಲೀಸರನ್ನು ಸಂಪರ್ಕಿಸಿ, ಡಿಜಿಟಲ್ ವಂಚನೆಯಿಂದ ನಿಮ್ಮನ್ನು ರಕ್ಷಿಸಲು ನಾವು ನಿಮ್ಮೊಂದಿಗಿದ್ದೇವೆ ಎಂದು ತಿಳಿಸಿದ್ದಾರೆ.