ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭ ಗುಡಿಯ ಪೋಟೋ ತೆಗೆದಿದ್ದಾರೆ.
ಅಲ್ಲದೆ ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ ಅರ್ಚಕರು, ಪುರೋಹಿತರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳನ್ನು, ನಿಂದನಾತ್ಮಕವಾಗಿ ಬರೆದು ಅರ್ಚಕರನ್ನು ತೇಜೋವದೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
“ತುಪ್ಪ ಕಳವಾಗುತ್ತಿರುವ ಬಗ್ಗೆ ಮೂರು ಬಾರಿ ದೂರು ಕೊಟ್ಟರೂ ಕಮಿಷನ್ ಆಸೆಗೆ ಠಾಣೆಗೆ ಕಾರ್ಯನಿರ್ವಹಣಾಧಿಕಾರಿ ದೂರು ನೀಡಿಲ್ಲ ,ಕದ್ದ ತುಪ್ಪದಲ್ಲಿ ಅವರಿಗೂ ಪಾಲು ಇರಬಹುದು” ಎಂಬ ಬರಹಗಳು ಹರಿದಾಡುತ್ತಿದೆ.
ಈ ಬಗ್ಗೆ ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಪ್ರತಿಕ್ರಿಯಿಸಿದ್ದು, ವಾಟ್ಸಪ್ ನಲ್ಲಿ ಹರಿದಾಡಿದ ವಿಚಾರ ನನ್ನ ಗಮನಕ್ಕೂ ಬಂದಿದೆ, ನಮ್ಮ ಆಡಳಿತ ಸಮಿತಿಯಿಂದಲೂ ದೂರು ನೀಡಲಾಗಿದೆ ಎಂದಿದ್ದಾರೆ.