ಮಾಲ್ಡೀವ್ಸ್ ನಿಂದ ಸೇನೆ ಹಿಂತೆಗೆದುಕೊಳ್ಳಲು ಭಾರತಕ್ಕೆ ಸೂಚನೆ

ಸಮಗ್ರ ನ್ಯೂಸ್: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ದೇಶದಿಂದ ಭಾರತೀಯ ಸೇನೆ ಹಿಂದೆಗೆದುಕೊಳ್ಳುವಂತೆ, ಅಲ್ಲಿನ ಸರ್ಕಾರವು ಅಧಿಕೃತವಾಗಿ ಭಾರತಕ್ಕೆ ಸೂಚಿಸಿದೆ.

Ad Widget ... ..

ಹೊಸದಾಗಿ ಆಯ್ಕೆಯಾದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಕಚೇರಿಯಿಂದ ಶನಿವಾರ ಈ ಘೋಷಣೆ ಮಾಡಲಾಗಿದೆ. ರಾಷ್ಟ್ರಪತಿಗಳ ಕಚೇರಿಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾದಾಗ ಅಧ್ಯಕ್ಷ ಮುಯಿಝು ಅವರು ಔಪಚಾರಿಕವಾಗಿ ಈ ಬಗ್ಗೆ ವಿನಂತಿಸಿದರು ಎಂದು ಪ್ರಕಟಣೆ ತಿಳಿಸಿದೆ.

Ad Widget

ಭೂ ವಿಜ್ಞಾನ ಸಚಿವರಾಗಿರುವ ರಿಜಿಜು ಅವರು ಮಾಲ್ಡೀವ್ಸ್ ಅಧ್ಯಕ್ಷರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು ಎಂದು ರಾಷ್ಟ್ರೀಯ ವಾಹಿನಿ NDTvವರದಿ ಮಾಡಿದೆ.

Leave a Comment

Your email address will not be published. Required fields are marked *