ಹವಾಮಾನ ವರದಿ| ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಚಾಮರಾಜ ನಗರ ಜಿಲ್ಲೆಗಳಲ್ಲಿ ಇಂದು (ನ.18) ಮಳೆಯಾಗಲಿದೆ.

. Ad Widget . Ad Widget

ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

. Ad Widget . . Ad Widget . Ad Widget

ವಾರಾಂತ್ಯದಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಕೊಡಗು, ಚಾಮರಾಜನಗರ, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಹಾವೇರಿ ಮತ್ತು ಗದಗ, ಶಿವಮೊಗ್ಗ, ಉಡುಪಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *