Ad Widget .

ನಾಳೆ ವಿಶ್ವಕಪ್ ಫೈನಲ್‌/ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್‌ ಮಾರ್ಲ್ಸ್ ಉಪಸ್ಥಿತಿ

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್‌ನ ಅಂತಿಮ ಹಣಾಹಣಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಭಾನುವಾರ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಹಲವಾರು ಗಣ್ಯರು ಸಾಕ್ಷಿಯಾಗಲಿದ್ದಾರೆ.

Ad Widget . Ad Widget .

ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್‌ ಮಾರ್ಲ್ಸ್ ಈ ಪಂದ್ಯಾಟವನ್ನು ವೀಕ್ಷಿಸಲಿದ್ದಾರೆ ಎಂದು ಗುಜರಾತ್ ಸರ್ಕಾರ ಅಧಿಕೃತವಾಗಿ ತಿಳಿಸಿದೆ.

Ad Widget . Ad Widget .

ಈ ಕುರಿತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಕಚೇರಿ ಪ್ರಕಟಣೆ ಹೊರಡಿಸಿದ್ದು, ಭದ್ರತೆ, ಸಂಚಾರ ನಿರ್ವಹಣೆ, ಸ್ವಚ್ಛತೆ ಮತ್ತು ಹೆಚ್ಚಿನ ಅಂಶಗಳ ಸಮಗ್ರ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದೆ. ಯಾವುದೇ ಲೋಪದೋಷ ಬಾರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಲೀಗ್ ಹಂತದಲ್ಲಿ ಯಾವುದೇ ಸೋಲನ್ನು ಕಾಣದಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

Leave a Comment

Your email address will not be published. Required fields are marked *