Ad Widget .

ಮಡಿಕೇರಿ: 70ನೇ ಅಖಿಲ ಭಾರತ ಸಹಕಾರ ಸಪ್ತಾಹಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಹಲವು ಸೌಲಭ್ಯ ಕಲ್ಪಿಸಿ: ಎ.ಮಂಜು

ಸಮಗ್ರ ನ್ಯೂಸ್: ನ.18, ಸಹಕಾರ ಕ್ಷೇತ್ರದಲ್ಲಿ ಸಹಕಾರಿಗಳಿಗಾಗಿ ಹಲವು ಸೌಲಭ್ಯಗಳನ್ನು ಕಲ್ಪಿಸುವುದು ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿಕರಿಗೆ ವಿವಿಧ ಸವಲತ್ತುಗಳನ್ನು ತಲುಪಿಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು ಅವರು ತಿಳಿಸಿದ್ದಾರೆ.

Ad Widget . Ad Widget .

ನಗರದ ಬಾಲಭಾವನದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಉನ್ನತೀಕರಣ ದಿನಾಚರಣೆ ಕಾರ್ಯಕ್ರಮದಲ್ಲಿ ನ. 18ರಂದು ಪಾಲ್ಗೊಂಡು ಅವರು ಮಾತನಾಡಿದರು.

Ad Widget . Ad Widget .

ಸಹಕಾರ ಕ್ಷೇತ್ರವು ವಿಶಾಲ ವ್ಯಾಪ್ತಿ ಹೊಂದಿದೆ. ಕೊನೆಯಿಲ್ಲದ ಸೇವೆ ಎಂದರೆ ಜನ ಸೇವೆ ಕಷ್ಟಕಾಲಕ್ಕೆ ರೈತರಿಗೆ ನೆರವಾಗುವುದು ಎಂದರೆ ಅದು ಸಹಕಾರ ಸಂಘ ಬ್ಯಾಂಕುಗಳು ಎಂದು ತಿಳಿಸಿದರು.
ಸಹಕಾರಿ ಯೂನಿಯನ್‍ಗಳು ಸಮೃದ್ಧವಾಗಬೇಕಾದರೆ ರಾಜಕೀಯತ್ವ ನಡೆಯಬಾರದು, ಆಗಲೇ ಸಹಕಾರಿ ಸಂಘ ಹಾಗೂ ಬ್ಯಾಂಕುಗಳು ಉನ್ನತಿ ಕಾಣಲು ಸಾಧ್ಯ. ಹಾಗೆಯೇ ರೈತಾಪಿ ವರ್ಗದ ಜೀವನವೇ ಅತ್ಯಂತ ಶ್ರೀಮಂತ ಜೀವನ. ರೈತರಿಂದಲೇ ಆರ್ಥಿಕತೆ ಸಮೃದ್ಧವಾಗಿರುವುದು ಎಂದು ಎ.ಮಂಜು ಅವರು ವಿವರಿಸಿದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಅವರು ಮಾತನಾಡಿ ಭಾರತದ ಆರ್ಥಿಕತೆಯನ್ನು ಮೂರನೇ ಸ್ಥಾನಕ್ಕೆ ತಲುಪಿಸಲು ಸಹಕಾರ ಸಂಸ್ಥೆಗಳಿಂದಲೇ ಸಾಧ್ಯ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸಹಕಾರಿ ಸಂಸ್ಥೆಗಳನ್ನು ಸದೃಢವಾಗಿಸಬೇಕು. ಆ ನಿಟ್ಟಿನಲ್ಲಿ ದೇಶದಾದ್ಯಂತ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತದೆ ಎಂದರು.
ಕೊಡಗು ಹಾಗೂ ದಕ್ಷಿಣ ಕನ್ನಡದ ಸಹಕಾರ ಸಂಸ್ಥೆಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಕೊಡಗು ಜಿಲ್ಲೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳಿಸಿದೆ ಎಂಬುದು ವಿಶೇಷ ಎಂದರು.

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂ.ಬಿ.ದೇವಯ್ಯ ಅವರು ಮಾತನಾಡಿ ಸಹಕಾರ ಸಂಘದಿಂದ ಸಾಲ ಸೌಲಭ್ಯ ಪಡೆದ ಎಷ್ಟೋ ಬಡ ಜನರು ಬದುಕು ಕಟ್ಟಿಕೊಂಡಿದ್ದಾರೆ ಎಂದರು.
ಕೊಡಗಿನ ಜನರು ಭೂಮಿ ಮಾರಿಕೊಳ್ಳಬಾರದು, ಕೃಷಿಕರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದಿದ್ದರೆ ಜಾಗದ ಮಾರಾಟ ಹೆಚ್ಚಾಗುತ್ತದೆ. ಇದನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
ಪತ್ರಕರ್ತ ಜಿ.ರಾಜೇಂದ್ರ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕಾಫಿ, ಕರಿಮೆಣಸು, ಜೇನು, ಕಿತ್ತಳೆ ಹೀಗೆ ಹಲವಾರು ಕೃಷಿಯಲ್ಲಿ ಪ್ರಸಿದ್ಧಿ ಪಡೆದಿದ್ದು, ಸಹಕಾರಿ ಬ್ಯಾಂಕ್‍ಗಳಿಂದ ಸಾಲ ವ್ಯವಸ್ಥೆಯು ರೈತರನ್ನು ಉಳಿಸಿದೆ. ಆ ನಿಟ್ಟಿನಲ್ಲಿ ಸಹಕಾರಿ ಕ್ಷೇತ್ರಗಳನ್ನು ಉಳಿಸಿದರೆ ರೈತರನ್ನು ಬೆಳೆಗಾರರನ್ನು ಉಳಿಸಿದಂತೆ ಎಂದರು.

ಕೆಐಸಿಎಂ ಕಾಲೇಜಿನ ಪ್ರಾಂಶುಪಾಲ ಆರ್.ಎಸ್. ರೇಣುಕಾ ಅವರು ಮಾತನಾಡಿ ವಿಶ್ವಸಂಸ್ಥೆಯು ದೇಶದ ಅಭಿವೃದ್ಧಿಗೆ 17 ಅಂಶಗಳನ್ನು ನೀಡಿದ್ದು, ಅದರಲ್ಲಿ ಆರು-ಏಳು ಅಂಶಗಳು ಸಹಕಾರ ಸಂಘಕ್ಕೆ ಹತ್ತಿರವಾಗಿರುತ್ತದೆ. ಆದ್ದರಿಂದ ಸಾರ್ವಜನಿಕ ಖಾಸಗಿ ಸಂಸ್ಥೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಿ, ನಡೆಸುವಂತದ್ದು ಒಂದು ಅಂಶವಾಗಿದೆ ಎಂದರು.

ಒಂದು ಗ್ರಾಮದ ಅಭಿವೃದ್ಧಿ ಆಗಬೇಕೆಂದರೆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರ ಸಂಘ, ಒಂದು ಬ್ಯಾಂಕ್ ಅವಶ್ಯಕತೆ ಇದೆ ಎಂದು ತಿಳಿಸಿದರು. ಸಹಕಾರಿ ಸಂಘಗಳು ಸಾಲ ಸೌಲಭ್ಯವಲ್ಲದೆ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಕೊಡಗು ಸಹಕಾರ ರತ್ನ ಪ್ರಶಸ್ತಿಗೆ ಕೊಳಕೇರಿಯ ಬಿದ್ದಾಟಂಡ ರಮೇಶ್ ಚಂಗಪ್ಪ, ಶ್ರೇಷ್ಠ ಸಹಕಾರಿಗಳು ಪ್ರಶಸ್ತಿಗೆ ಮಡಿಕೇರಿಯ ಕೊಂಗಂಡ ಎ.ತಿಮ್ಮಯ್ಯ, ಪೊನ್ನಂಪೇಟೆಯ ಚಿರಿಯಪಂಡ ಉತ್ತಪ್ಪ, ಸೋಮವಾರಪೇಟೆಯ ಎಚ್.ಎಸ್.ಸುಬ್ಬಪ್ಪ, ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿಗೆ ಮಡಿಕೇರಿಯ ಮಣವಟ್ಟಿರ ಕಾವೇರಿಯಮ್ಮ ಪೂವಣ್ಣ ಅವರು ಆಯ್ಕೆಯಾಗಿದ್ದು ಕಾರ್ಯಕ್ರಮದಲ್ಲಿ ಪ್ರಶಸ್ತಿಗೆ ಭಾಜನರಾಗಿರುವವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕೊಡಗು ಜಿಲ್ಲೆ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಮನು ರಾಮಚಂದ್ರ, ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ರವಿಬಸಪ್ಪ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಕೆ.ಎ.ಸಂಪತ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕ ಬಿ.ಡಿ.ಮಂಜುನಾಥ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಪಿ.ಸಿ.ಅಚ್ಚಯ್ಯ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಪ್ರೇಮ ಸೋಮಯ್ಯ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಕೆ.ಎಮ್.ತಮ್ಮಯ್ಯ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಸಿ.ಎಸ್.ಕೃಷ್ಣ ಗಣಪತಿ, ಪಿ.ವಿ.ಭರತ್, ವಿ.ಕೆ.ಅಜಯ್ ಕುಮಾರ್, ಎನ್.ಎಂ.ಉಮೇಶ್ ಉತ್ತಪ್ಪ, ಪಿ.ಬಿ.ಯತೀಶ್, ಸಹಕಾರ ಸಂಘಗಳ ಉಪನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್, ಸಿಬ್ಬಂದಿಗಳಾದ ಬಿ.ಸಿ.ಅರುಣ್ ಕುಮಾರ್, ಸುರೇಶ್, ಜಿಲ್ಲಾ ಸಹಕಾರ ಸಂಘದ ಯೂನಿಯನ್ ವ್ಯವಸ್ಥಾಪಕಿ ಮಂಜುಳ ಆರ್. ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *