Ad Widget .

ಕಡಬ: ದರ್ಗಾದ ಬೀಗ ಮುರಿದು ಕಳ್ಳತನ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ(ನ.20) ಬೆಳಿಗ್ಗೆ ಬೆಳಕಿಗೆ ಬಂದಿದೆ.

Ad Widget . Ad Widget .

ತಡರಾತ್ರಿ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Ad Widget . Ad Widget .

ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Leave a Comment

Your email address will not be published. Required fields are marked *