ಜಾತಿ ಗಣತಿ ವಿಚಾರ|ಕಾಂಗ್ರೆಸ್‌ನಲ್ಲಿಯೇ ಪರ-ವಿರೋಧ

ಜಾತಿ ಗಣತಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಸಹಿ ಹಾಕುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸಿದ್ದು, ಈ ಮೂಲಕ ಕಾಂಗ್ರೆಸ್‌ನಲ್ಲಿಯೇ ಜಾತಿ ಗಣತಿ ಕುರಿತು ಪರ ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿದೆ.

. Ad Widget . Ad Widget . Ad Widget

ಒಕ್ಕಲಿಗರ ಮನವಿ ಪತ್ರಕ್ಕೆ ಸಹಿ ಮಾಡುವ ಮೂಲಕ ಕಾಂತರಾಜ ಆಯೋಗ ವರದಿಗೆ ಡಿಸಿಎಂ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ವರದಿ ಜಾರಿಗೆ ಸಚಿವರಾದ ಪರಮೇಶ್ವ‌ರ್, ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ ಆಗ್ರಹಿಸಿದ್ದರೆ, ಒಕ್ಕಲಿಗ ಮತ್ತು ಲಿಂಗಾಯಿತ ಸಮಾಜದ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ.

. Ad Widget .

ಹಿಂದುಳಿದ ವರ್ಗಗಳ ಆಯೋಗಕ್ಕೆ ಒಕ್ಕಲಿಗರ ಸಂಘದಿಂದ ಮನವಿ ಪತ್ರ ಸಲ್ಲಿಸಲಾಗಿದ್ದು, ಒಕ್ಕಲಿಗ ಸಮುದಾಯದ ನಾಯಕರಾದ ಹೆಚ್.ಡಿ.ದೇವೇಗೌಡ, ಎಸ್.ಎಂ. ಕೃಷ್ಣ, ಡಿ.ವಿ. ಸದಾನಂದ ಗೌಡ, ಶೋಭಾ ಕರಂದ್ಲಾಜೆ, ಹೆಚ್.ಡಿ. ಕುಮಾರಸ್ವಾಮಿ, ಆ‌ರ್. ಅಶೋಕ, ಅಶ್ವತ್ಥ ನಾರಾಯಣ ಸೇರಿದಂತೆ ಹಲವರು ಸಹಿ ಮಾಡಿದ್ದಾರೆ.

Leave a Comment

Your email address will not be published. Required fields are marked *