ಬೆಂಗಳೂರಿನ ಕಂಬಳಕ್ಕೆ ಬ್ರಿಜ್ ಭೂಷಣ್ ಅನುಪಸ್ಥಿತಿ

ಸಮಗ್ರ ನ್ಯೂಸ್: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯಲಿರುವ ಕಂಬಳದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಹಾಗೂ ಕಂಬಳ ಸಮಿತಿ ಅಧ್ಯಕ್ಷ ಅಶೋಕ್‍ಕುಮಾರ್ ರೈ ತಿಳಿಸಿದ್ದಾರೆ.

. Ad Widget . Ad Widget . Ad Widget

ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಡೆಯುತ್ತಿರುವ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸಂಸದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು. ಇದು ಕಾಂಗ್ರೆಸ್ ಕಾರ್ಯಕರ್ತರ ಕೋಪಕ್ಕೆ ಕಾರಣವಾಗಿತ್ತು. ಇದೀಗ ಬ್ರಿಜ್ ಭೂಷಣ್ ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸುವುದರೊಂದಿಗೆ ಕೋಪ ತಣ್ಣಗಾಗುವ ಸಾಧ್ಯತೆ ಇದೆ.

. Ad Widget .

Leave a Comment

Your email address will not be published. Required fields are marked *