Ad Widget .

ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲು/ ಪ್ರಾಯೋಗಿಕ ಸಂಚಾರ ಆರಂಭ

ಸಮಗ್ರ ನ್ಯೂಸ್: ಬೆಂಗಳೂರು-ಧಾರವಾಡ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದ್ದು, ಇಂದಿನಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ.

Ad Widget . Ad Widget .

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಬೆಳಿಗ್ಗೆ 5.45ಕ್ಕೆ ಹೊರಟ ರೈಲು, ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದ್ದು, ಅಲ್ಲಿಂದ ಮಧ್ಯಾಹ್ನ 2ಕ್ಕೆ ವಾಪಸ್ ಹೊರಟು ರಾತ್ರಿ 10.10ಕ್ಕೆ ಬೆಂಗಳೂರು ತಲುಪಲಿದೆ.

Ad Widget . Ad Widget .

ಬೆಂಗಳೂರು ಮತ್ತು ಧಾರವಾಡ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ ಹಿನ್ನಲೆಯಲ್ಲಿ ಅದನ್ನು ಬೆಳಗಾವಿವರೆಗೆ ವಿಸ್ತರಿಸಲು ಬೇಡಿಕೆ ಬಂದಿತ್ತು. ಹೀಗಾಗಿ ರೈಲ್ವೆ ಬೋರ್ಡ್ ಸಂಚಾರ ವಿಸ್ತರಿಸಿ ಆದೇಶ ನೀಡಿತ್ತು.

Leave a Comment

Your email address will not be published. Required fields are marked *