ಇಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ-20/ ಸವಾಲಿಗೆ ಸಜ್ಜಾಗಿದೆ ಭಾರತದ ಯುವಪಡೆ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದ್ದು ಭಾರತದ ಯುವ ತಂಡ ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲು ಸಜ್ಜಾಗಿದೆ.

Ad Widget ... ..

ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದ ಸೋಲಿನ ನಂತರ ಪ್ರಮುಖ ಆಟಗಾರರು ವಿಶ್ರಾಂತಿಯ ಕಾರಣದಿಂದ ಹೊರಗುಳಿದಿದ್ದು, ಸೂರ್ಯಕುಮಾ‌ರ್ ಯಾದವ್ ಸಾರಥ್ಯದಲ್ಲಿ ಯುವ ಆಟಗಾರರ ತಂಡ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ.

Ad Widget

ಹಾರ್ದಿಕ್ ಪಾಂಡ್ಯ ಗಾಯಾಳುವಾದ ಕಾರಣದಿಂದ ಮೊದಲ ಬಾರಿಗೆ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುತ್ತಿದ್ದು, ಗೆಲುವಿನ ದಡ ಸೇರಿಸುವರೇ ಎಂಬುದನ್ನು ಕಾದು ನೋಡಬೇಕಿದೆ. ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಮುನ್ನಡೆಸುತ್ತಿದ್ದಾರೆ.

ಈ ಸರಣಿಯ ಮೊದಲ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.

Leave a Comment

Your email address will not be published. Required fields are marked *