Ad Widget .

ಐಸಿಸಿ ಏಕದಿನ ಶ್ರೇಯಾಂಕ/ ಭಾರತದ್ದೇ ಪಾರುಪತ್ಯ

ಸಮಗ್ರ ನ್ಯೂಸ್: ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದ್ದು, ಎಲ್ಲಾ ವಿಭಾಗಗಳಲ್ಲೂ ಭಾರತದ ಆಟಗಾರರು ಪಾರುಪತ್ಯ ಮೆರೆದಿದ್ದಾರೆ.

Ad Widget . Ad Widget .

ಬ್ಯಾಟಿಂಗ್ ವಿಭಾಗದಲ್ಲಿ ಶುಭ್‍ಮನ್ ಗಿಲ್ ವಿಶ್ವಕಪ್ ಫೈನಲ್‍ನಲ್ಲಿ ವಿಫಲಗೊಂಡರೂ ತನ್ನ ಅಗ್ರಸ್ಥಾನ ಉಳಿಸಿಕೊಳ್ಳಲು ಸಫಲರಾಗಿದ್ದಾರೆ, ಆದರೆ ಈ ಬಾರಿ ರೇಟಿಂಗ್ ಅಂಕದಲ್ಲಿ ಕುಸಿತ ಕಂಡಿದ್ದಾರೆ. ವಿಶ್ವಕಪ್‍ನಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಏರಿದ್ದಾರೆ ಮತ್ತು ರೋಹಿತ್ ಶರ್ಮಾ 769 ರೇಟಿಂಗ್ ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Ad Widget . Ad Widget .

ಬೌಲಿಂಗ್ ವಿಭಾಗದಲ್ಲಿ ವಿಶ್ವಕಪ್‍ನಲ್ಲಿ ವೈಫಲ್ಯ ಕಂಡ ಮೊಹಮ್ಮದ್ ಸಿರಾಜ್ ದ್ವಿತೀಯ ಸ್ಥಾನಕ್ಕೆ ಜಾರಿದ್ದು, ಅಮೋಘ ಬೌಲಿಂಗ್ ಪ್ರದರ್ಶಿಸಿ 24 ವಿಕೆಟ್ ಪಡೆದುಕೊಂಡ ಮೊಹಮ್ಮದ್ ಶಮಿ ಟಾಪ್ 10ರ ಒಳಗೆ ಪ್ರವೇಶ ಪಡೆದಿದ್ದಾರೆ. ಬುಮ್ರಾ ನಾಲ್ಕನೇ ಸ್ಥಾನ ಹಾಗೂ ಕುಲ್‍ದೀಪ್ ಯಾದವ್ ಆರನೇ ಸ್ಥಾನವನ್ನು ಪಡೆದಿದ್ದಾರೆ. ಆಲ್‍ರೌಂಡರ್ ವಿಭಾಗದಲ್ಲಿ ಜಡೇಜಾ 10ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ

Leave a Comment

Your email address will not be published. Required fields are marked *