Ad Widget .

ಬೆಳ್ತಂಗಡಿ: ತೆಕ್ಕಾರಿ‌ನಲ್ಲಿ ನಾಗಸಾನಿಧ್ಯದ ಸುಳಿವು| ಮುಸ್ಲಿಂ ವ್ಯಕ್ತಿ ಬಿಟ್ಟುಕೊಟ್ಟ‌ ಜಾಗದಲ್ಲಿ ಬಿಚ್ಚಿಕೊಳ್ತಿದೆ ಗೋಪಾಲಕೃಷ್ಣನ ರಹಸ್ಯ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ಮುಸ್ಲಿಂ ವ್ಯಕ್ತಿ ಅತಿಕ್ರಮಿಸಿದ್ದ ಜಾಗದಲ್ಲಿ ದೇವಸ್ಥಾನ ಪತ್ತೆ ವಿಚಾರ ‘ ಇದೀಗ ಅದರ ಬೆನ್ನಲ್ಲೇ ಗ್ರಾಮಸ್ಥರು ಅದೇ ಜಾಗದಲ್ಲಿಯೇ ಪ್ರಶ್ನಾ ಚಿಂತನೆ ಇಟ್ಟಿದ್ದಾರೆ. ಪ್ರಶ್ನಾ ಚಿಂತನೆಯಲ್ಲಿ ನಾಗ ಸಾನಿಧ್ಯದ ಸುಳಿವು ಗೋಚರವಾಗಿದೆ. ದೈವಜ್ಞ ಮಾಡಾವು ವೆಂಕಟ್ರಮಣ್ ಭಟ್ ನೇತೃತ್ವದ ಪ್ರಶ್ನಾ ಚಿಂತನೆಯಲ್ಲಿ ದೇವಸ್ಥಾನ ಪತ್ತೆಯಾದ ಜಾಗದ ಹತ್ತಿರದಲ್ಲೇ ನಾಗಬನ ಇರುವ ಸುಳಿವು ಸಿಕ್ಕಿದೆ.

Ad Widget . Ad Widget .

ಹಿಂದಿನ ಪ್ರಶ್ನಾ ಚಿಂತನೆ ವೇಳೆ ಉತ್ಖನನ ನಡೆಸಿದ ಮೇಲೆ ಮುಸ್ಲಿಂ ವ್ಯಕ್ತಿ ಅತಿಕ್ರಮಿಸಿದ್ದ ಸರ್ಕಾರಿ ಜಾಗದ 15 ಅಡಿ ಆಳದಲ್ಲಿ ದೇವರ ವಿಗ್ರಹ, ಪಾಣಿಪೀಠ, ಪಂಚಾಂಗದ ಕಲ್ಲುಗಳು ಪತ್ತೆಯಾಗಿತ್ತು. ಹತ್ತಾರು ವರ್ಷಗಳ ಹಿಂದೆಯೇ ಗ್ರಾಮದಲ್ಲಿ ದೇವಸ್ಥಾನ ಇರುವ ಬಗ್ಗೆ ಪ್ರಶ್ನಾಚಿಂತನೆ ವೇಳೆ ಬಯಲಾಗಿತ್ತು. ಸದ್ಯ ದೇವಸ್ಥಾನ ಪತ್ತೆ ಬೆನ್ನಲ್ಲೇ ನಾಗಾರಾಧನೆ ಬಗ್ಗೆಯೂ ಸ್ಪೋಟಕ ಸತ್ಯ ಬಹಿರಂಗವಾಗಿದೆ. ಈ ಮೂಲಕ ತೆಕ್ಕಾರು ಗೋಪಾಲಕೃಷ್ಣ ದೇವರ ರಹಸ್ಯ ತೆರೆದಷ್ಟು ಬಿಚ್ಚಿಕೊಳ್ಳುತ್ತಲೇ ಇದೆ. ಇದರಿಂದ ತೆಕ್ಕಾರಿನಲ್ಲಿ ಮತ್ತೊಂದು ಉತ್ಖನನಕ್ಕೆ ದಾರಿ ಮಾಡಿಕೊಡುತ್ತಾ ಹೊಸ ಪ್ರಶ್ನಾ ಚಿಂತನೆ ಎಂಬ ಪ್ರಶ್ನೆ ಮೂಡಿದೆ.

Ad Widget . Ad Widget .

ನೂರಾರು ವರ್ಷಗಳ ಹಿಂದೆ ದಂಡಯಾತ್ರೆ ವೇಳೆ ಟಿಪ್ಪು ಸುಲ್ತಾನ್ ದಾಳಿಗೆ ಗೋಪಾಲಕೃಷ್ಣ ದೇವಸ್ಥಾನ ತುತ್ತಾಗಿದೆ ಎನ್ನಲಾಗಿದೆ. ಹತ್ತಾರು ವರ್ಷಗಳ ಹಿಂದೆಯೇ ಗ್ರಾಮದಲ್ಲಿ ದೇವಸ್ಥಾನ ಇರುವ ಬಗ್ಗೆ ಪ್ರಶ್ನಾಚಿಂತನೆ ವೇಳೆ ಬಯಲಾಗಿದೆ.

ಅಲ್ಲದೇ ಕೆಲ ಹಿರಿಯರ ಮಾಹಿತಿಯಂತೆ ಮುಸ್ಲಿಂ ವ್ಯಕ್ತಿಯ ಜಾಗದಲ್ಲಿ ದೇವಸ್ಥಾನವಿದ್ದ ಮಾಹಿತಿ ಹಿನ್ನೆಲೆ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ಮಾಡಿಕೊಂಡು ದೇವಸ್ಥಾನ ಶೋಧ ಆರಂಭಿಸಲಾಗಿತ್ತು. ಆದರೆ ನಿಖರ ಜಾಗದ ಮಾಹಿತಿ ಇಲ್ಲದ ಕಾರಣ ಗ್ರಾಮಸ್ಥರು ಸುಮ್ಮನಾಗಿದ್ದರು.

ಆದರೆ 10 ವರ್ಷಗಳ ಹಿಂದೆ ಬೆಂಗಳೂರು ಮೂಲದ ಲಕ್ಷ್ಮಣ ಎಂಬವರಿಂದ ತೆಕ್ಕಾರು ಬಳಿ ಜಾಗ ಖರೀದಿ ಮಾಡಲಾಗಿತ್ತು. ಈ ವೇಳೆ ಪ್ರಶ್ನಾ ಚಿಂತನೆ ವೇಳೆ ಲಕ್ಷ್ಮಣರ ಜಾಗದ ಸಮೀಪವೇ ದೇವಸ್ಥಾನ ಇರುವ ಸುಳಿವು ಸಿಕ್ಕಿದೆ. ಆದರೆ ಲಕ್ಷ್ಮಣರ ಜಾಗದ ಸನಿಹ ಹಾಮದ್ ಬಾವಾ ಎಂಬವರ ಜಾಗವಿತ್ತು.

ಈ ಮಧ್ಯೆ ಲಕ್ಷ್ಮಣ್ ಅವರ ಕನಸಿನಲ್ಲಿ ವಿಷ್ಣು ದೇವರು ಬಂದು ಇರುವಿಕೆ ತೋರಿದ್ದರು. ಬಾವಿಯ ಆಳದಲ್ಲಿ ವಿಷ್ಣುವಿನ ವಿಗ್ರಹದ ಮಾದರಿಯಲ್ಲಿ ಲಕ್ಷ್ಮಣರಿಗೆ ಕನಸು ಬಿದ್ದಿದೆ. ಅದರಂತೆ ಮತ್ತೆ ಪ್ರಶ್ನಾ ಚಿಂತನೆ ಹಾಕಿದಾಗ ಮುಸ್ಲಿಂ ವ್ಯಕ್ತಿಯ ಜಾಗದಲ್ಲಿ ದೇವಸ್ಥಾನ ಇರುವ ಮಾಹಿತಿ ತಿಳಿದುಬಂದಿದೆ.

Leave a Comment

Your email address will not be published. Required fields are marked *