ಸಮಗ್ರ ನ್ಯೂಸ್: ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆಯು ಇಂದು ದೆಹಲಿಯಲ್ಲಿ ನಡೆದಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಬಾಕಿ ಇರುವ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಆದೇಶ ನೀಡಿದೆ.
ಇತ್ತ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಸಮಿತಿಯ ಈ ನಿರ್ಧಾರ ಕರ್ನಾಟಕಕ್ಕೆ ಶಾಕ್ ನೀಡಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹ ತಳ ಸೇರುತ್ತಿದ್ದು, ಕರ್ನಾಟಕದಿಂದ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.