ಸಮಗ್ರ ನ್ಯೂಸ್: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2023ರ (ಟಿಇಟಿ) ಫಲಿತಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಫಲಿತಾಂಶವನ್ನು ಶಿಕ್ಷಣ ಇಲಾಖೆಯ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಜುಲೈ 14 ರಿಂದ ಆಗಸ್ಟ್ 15ರವರೆಗೆ ಅವಕಾಶ ನೀಡಲಾಗಿದ್ದು, ರಾಜ್ಯದ 35 ಶೈಕ್ಷಣಿಕ ಜಿಲ್ಲಾ ಕೇಂದ್ರದಲ್ಲಿ ಸೆ.3ರಂದು ಪರೀಕ್ಷೆ ನಡೆಸಲಾಗಿತ್ತು. . ಅಭ್ಯರ್ಥಿಗಳು ಅರ್ಜಿಸಂಖ್ಯೆ ಮತ್ತು ಅಭ್ಯರ್ಥಿಯ ಜನ್ಮದಿನಾಂಕ (ಆನ್‍ಲೈನ್ ಅರ್ಜಿಯಲ್ಲಿರುವಂತೆ) ನಮೂದಿಸಿ ಫಲಿತಾಂಶ ವೀಕ್ಷಿಸುವುದಷ್ಟೇ ಅಲ್ಲದೇ ಶಿಕ್ಷಣ ಇಲಾಖೆಯ ವೆವ್‍ಸೈಟ್‍ನಲ್ಲಿ ನೀಡಲಾದ ಲಿಂಕ್ ಮೂಲಕ ಸುರಕ್ಷತಾ ಕೋಡ್ ಹೊಂದಿರುವ ಗಣಕೀಕೃತ ಪ್ರಮಾಣಪತ್ರವನ್ನು ಪಡೆದುಕೊಳ್ಳಬಹುದಾಗಿದೆ.
ಈ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಈ ಪ್ರಮಾಣ ಪತ್ರವು ಸೀಮಿತ ದಿನಗಳವರೆಗೆ ಮಾತ್ರ ವೆಬ್‍ಸೈಟ್‍ನಲ್ಲಿ ಲಭ್ಯವಿರಲಿದ್ದು, ಅಭ್ಯರ್ಥಿಗಳು ಸಾಕಷ್ಟು. ಸಂಖ್ಯೆಯ ಪ್ರತಿಗಳನ್ನು ಡೌನ್‍ಲೋಡ್ ಮಾಡಿಕೊಂಡು ತಮ್ಮಲ್ಲಿ ಇಟ್ಟುಕೊಳ್ಳಬಹುದು.