Ad Widget .

ವಿಶ್ವಕಪ್ ಸೋಲಿನ ಆಘಾತ/ ಟಿ-20ಗೆ ವಿದಾಯ ಹೇಳುತ್ತಾರಾ ರೋಹಿತ್?

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್ ಸೋಲಿನ ನೋವಿನಿಂದ ಕ್ರಿಕೆಟ್ ಅಭಿಮಾನಿಗಳು ಹೊರಬರುವ ಮುನ್ನವೇ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಂದಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ-20 ಕ್ರಿಕೆಟ್‍ಗೆ ವಿದಾಯ ಹೇಳಲಿದ್ದಾರೆ ಎಂಬ ಮಾತು ಕ್ರಿಕೆಟ್ ವಲಯದಲ್ಲಿ ಕೇಳಿಬರುತ್ತಿದೆ. ರೋಹಿತ್ ಶರ್ಮಾ ಈ ನಿರ್ಧಾರವನ್ನು ಏಕದಿನ ವಿಶ್ವಕಪ್‍ಗೂ ಮೊದಲೇ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾದ ಅಜಿತ್ ಅಗರ್ಕರ್ ಜೊತೆ ಮಾತನಾಡಿರುವುದಾಗಿ ಬಿಸಿಸಿಐ ಮೂಲಗಳು ತಿಳಿಸಿವೆ.

Ad Widget . Ad Widget .

ಕಳೆದ ಒಂದು ವರ್ಷದಿಂದ ಭಾರತ ತಂಡದ ಪರವಾಗಿ ಯಾವುದೇ ಟಿ-20 ಪಂದ್ಯಗಳಲ್ಲಿ ರೋಹಿತ್ ಪ್ರತಿನಿಧಿಸುತ್ತಿಲ್ಲ. ಹಾರ್ದಿಕ್ ಪಾಂಡ್ಯ ಟಿ-20 ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ರೋಹಿತ್ ಶರ್ಮಾ ಟಿ-20 ಕ್ರಿಕೆಟ್‍ನಿಂದ ದೂರ ಉಳಿದಿದ್ದರು. ಏಕದಿನ ವಿಶ್ವಕಪ್‍ನತ್ತ ಗಮನ ಹರಿಸುವ ದೃಷ್ಟಿಯಿಂದ ರೋಹಿತ್ ಶರ್ಮಾ ಟಿ-20 ಮಾದರಿಯಿಂದ ದೂರ ಉಳಿದಿದ್ದರು ಎಂದು ಹೇಳಲಾಗುತ್ತಿತ್ತು.

Ad Widget . Ad Widget .

ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‍ನಲ್ಲಿ ಹೆಚ್ಚಿನ ಗಮನ ಹರಿಸುವ ದೃಷ್ಟಿಯಿಂದ ರೋಹಿತ್ ಶರ್ಮಾ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳುತ್ತಿವೆ.

Leave a Comment

Your email address will not be published. Required fields are marked *