ಬೆಳ್ತಂಗಡಿ: ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್| ಸವಾರ ಸಾವು

ಸಮಗ್ರ ನ್ಯೂಸ್: ನಿಯಂತ್ರಣ ತಪ್ಪಿ, ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆ ಖಾಸಗಿ ಕಾಲೇಜು ರಸ್ತೆಯ ಬಳಿ ನ. 23ರಂದು ನಡೆದಿದೆ.

Ad Widget ... ..

ಮೃತ ವಿದ್ಯಾರ್ಥಿ ದೀಕ್ಷಿತ್ (20) ಕಲ್ಮಂಜ ಗ್ರಾಮದ ಬಟ್ಟಾಜೆ ನಿವಾಸಿಯಾಗಿದ್ದು, ಉಜಿರೆಯ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದರು.

Ad Widget

ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ಮಧ್ಯಾಹ್ನ ಊಟ ಮುಗಿಸಿ, ಮರಳಿ ಕಾಲೇಜಿಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ವಿದ್ಯಾರ್ಥಿಯ ತಲೆಗೆ ಗಂಭೀರ ಗಾಯವಾಗಿದ್ದು, ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸಂಜೆ ವೇಳೆ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *