Ad Widget .

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್/ ರಾಷ್ಟ್ರೀಯ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ

ಸಮಗ್ರ ನ್ಯೂಸ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜ್‍ಶರಣ್ ಶಾಹಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಯಾಜ್ಞವ ಶುಕ್ಲಾ ಅವರು ಪುನರಾಯ್ಕೆಯಾಗಿದ್ದಾರೆ.

Ad Widget . Ad Widget .

ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಅಧಿಕಾರಿ ಸಿ.ಎನ್.ಪಟೇಲ್, ದಿಲ್ಲಿಯಲ್ಲಿ ಡಿ.7 ರಿಂದ10 ರವರೆಗೆ ನಡೆಯಲಿರುವ ಎಬಿವಿಪಿಯ 69 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಇವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ಎಬಿವಿಪಿಯ ಮುಂಬೈ ಕೇಂದ್ರ ಕಚೇರಿಯಿಂದ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

ಶಾಹಿ ಅವರು ಉತ್ತರಪ್ರದೇಶದ ಗೋರಖ್‍ಪುರ ಜಿಲ್ಲೆಯವರಾಗಿದ್ದು, ಅವರು ಲಕ್ಷ್ಮೀದ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದ ಶಿಕ್ಷಣ ಇಲಾಖೆಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿದ್ದು ಪಿಎಚ್‍ಡಿ ಪದವೀಧರರಾಗಿದ್ದಾರೆ. ಉತ್ತರಪ್ರದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯ ಸದಸ್ಯರಾಗಿದ್ದಾರೆ.

Leave a Comment

Your email address will not be published. Required fields are marked *