Ad Widget .

ಬೆಂಗಳೂರು ಕಂಬಳ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ದುರ್ಘಟನೆ| ದ.ಕ ಜಿಲ್ಲೆಯ ಇಬ್ಬರು ಯುವಕರು ದುರ್ಮರಣ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿ ವಾಪಾಸಾಗುತ್ತಿದ್ದ ವೇಳೆ ಕಾರು ಮತ್ತು ಬೋರ್‌ವೆಲ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ಯುವಕರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಪೆರಾರ ಬಜ್ರೆ ಗ್ರಾಮದ ನಿವಾಸಿ ಕಿಶನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲೀಪ್ ಲೋಬೋ (32) ಎಂದು ಗುರುತಿಸಲಾಗಿದೆ.

Ad Widget . Ad Widget .

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ನಿತೀಶ್ ಬಂಡಾರಿ, ಪ್ರೀತಿ ಲೋಬೋ ಮತ್ತು ಹರೀಶ್ ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಬೋರ್‌ವೆಲ್ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Ad Widget . Ad Widget .

ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಹಾಗೂ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *