Ad Widget .

ಚಿಕ್ಕಮಗಳೂರು : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು

ಸಮಗ್ರ ನ್ಯೂಸ್: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ.

Ad Widget . Ad Widget .

ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿಯನ್ನ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋ ವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾನೆ.

Ad Widget . Ad Widget .

ವಿದ್ಯುತ್ ಶಾಕ್ ನಿಂದ ತೋಟದಲ್ಲೇ ಬಿದ್ದಿದ್ದ ಅಭಿಷೇಕ್ ನನ್ನು ಕೂಡಲೇ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು ಕೂಡ ತೀವ್ರವಾದಂತ ವಿದ್ಯುತ್ ಶಾಕ್ ನಿಂದ ಅಭಿಷೇಕ್ ಅಸುನೀಗಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *