ಹಾಸ್ಟೆಲ್ ನಲ್ಲಿ ಚಿತ್ರಾನ್ನ ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ

ಸಮಗ್ರ ಸಮಾಚಾರ: ಹಾಸ್ಟೆಲ್‌ನಲ್ಲಿ ಬೆಳಗ್ಗೆ ಚಿತ್ರಾನ್ನ ಸೇವಿಸಿದ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರೋ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. 23 ವಿದ್ಯಾರ್ಥಿಗಳು ಅಸ್ಪಸ್ಥರಾಗಿದ್ದಾರೆ. ಈ ಪೈಕಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ ಅಂತ ಹೇಳಲಾಗುತ್ತಿದೆ. ಅಸ್ವಸ್ಥ ಮಕ್ಕಳನ್ನು ದಾವಣಗೆರೆ ಜಿಲ್ಲಾಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

Ad Widget ... ..

ಚನ್ನಗಿರಿಯ ಕಾಕನೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳು ಅಸ್ವಸ್ಥಗೊಂಡಿರೋ ಘಟನೆ ನಡೆದಿದೆ. ಅಸ್ವಸ್ಥರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಈ ಪೈಕಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ.

Ad Widget

ಬೆಳಗ್ಗೆ ಹಾಸ್ಟೆಲ್‌ನಲ್ಲಿ ಚಿತ್ರಾನ್ನ ತಿಂದ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದರು. ಸದ್ಯ ಹೊಟ್ಟೆ ನೋವಿನಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳು ಒದ್ದಾಡುತ್ತಿದ್ದಾರೆ.
ಇನ್ನು ಅಸ್ವಸ್ಥ ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ. 8 ಮಕ್ಕಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಉಳಿದ ಮಕ್ಕಳಿಗೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Comment

Your email address will not be published. Required fields are marked *