ಆದಾಯ ಮೀರಿದ ಆಸ್ತಿ‌ ಗಳಿಕೆ ವಿಚಾರ| ಡಿಸಿಎಂ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆದಿತ್ತು. ಈ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Ad Widget ... ..

ಈಗಾಗಲೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಮೇಲಿನ ಕೇಸ್ ಸಂಬಂಧ ತೆಗೆದುಕೊಂಡ ನಿರ್ಧಾರದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದರು. ಅಲ್ಲದೇ ತಾವು ಸರ್ಕಾರದ ಕ್ರಮವನ್ನು ಕೋರ್ಟ್ ನಲ್ಲಿ ಪ್ರಶ್ನಿಸೋದಾಗಿಯೂ ತಿಳಿಸಿದ್ದರು.

Ad Widget

ಇದೀಗ ಅದರಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ನಿರ್ಧಾರ ಕ್ರಮವಾಗಿಲ್ಲ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ನೀಡಲಾಗಿದ್ದ ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮದ ಬಗ್ಗೆ ಸೂಕ್ತ ನಿರ್ದೇಶವನ್ನು ಸರ್ಕಾರಕ್ಕೆ ನೀಡುವಂತೆ ಕೋರಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಗೆ ಬಿಗ್ ಶಾಕ್ ನೀಡಿದ್ದಾರೆ.

Leave a Comment

Your email address will not be published. Required fields are marked *