Ad Widget .

ಬಗೆಹರಿಯುವ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಬಗೆಹರಿಸಿ| ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಸಮಗ್ರ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಬಗೆಹರಿಯಬೇಕಾದ ಸಮಸ್ಯೆಗಳು ಅಲ್ಲಿಯೇ ಬಗೆಹರಿಯಬೇಕು. ಜನ ದುಡ್ಡು ಖರ್ಚು ಮಾಡಿಕೊಂಡು ಬೆಂಗಳೂರಿನವರೆಗೂ ಬಂದರೆ ನಿಮ್ಮ ವೈಫಲ್ಯ ಎಂದರ್ಥ. ಇದನ್ನು ಸಹಿಸುವುದಿಲ್ಲ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜನ ಸ್ಪಂದನಾ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರಕಿದ ಬಳಿಕ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದ ಸಿಎಂ, ಎರಡು ತಿಂಗಳ ಹಿಂದೆಯೇ ನಡೆಯಬೇಕಾಗಿತ್ತು.ಆದರೆ ಅನಿವಾರ್ಯ ಕಾರಣಗಳಿಂದ ಇವತ್ತು ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎಲ್ಲ ಜಿಲ್ಲಾ ಸಚಿವರಿಗೆ, ತಮ್ಮ ಜಿಲ್ಲೆಗಳಲ್ಲಿ ಜನತಾ ಸ್ಪಂದನ ಕಾರ್ಯಕ್ರಮ ಮಾಡಿ, ವರದಿ ಸಲ್ಲಿಸಬೇಕೆಂದು ತಿಳಿಸಲಾಗಿತ್ತು. ಆದರೆ ಕೆಲವು ಜಿಲ್ಲೆಗಳಿಂದ ಮಾತ್ರ ವರದಿ ಬಂದಿದ್ದು, ಉಳಿದ ಜಿಲ್ಲೆಗಳಿಂದ ವರದಿ ಬಂದಿಲ್ಲ. ಇದನ್ನು ಸಹಿಸುವುದಿಲ್ಲ ಎಂದು ಹೇಳಿದರು.

Ad Widget . Ad Widget . Ad Widget .

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸದಿದ್ದಲ್ಲಿ ಸಮಸ್ಯೆಗಳು ಬೆಳೆಯುತ್ತಲೇ ಹೋಗುತ್ತವೆ. ಅನೇಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿ ಪರಿಹಾರ ನೀಡಲು ಸಾಧ್ಯವಾಗುತ್ತದೆ. ಕೆಲವು ಅರ್ಜಿಗಳು ಕೂಡಲೇ ತೀರ್ಮಾನ ಮಾಡಲು ಆಗೊದಿಲ್ಲ. ಸಮಯ ಬೇಕಾಗುತ್ತದೆ ಎಂದು ಸಿಎಂ ಹೇಳಿದರು

ಜನತಾ ದರ್ಶನದಲ್ಲಿ ಬಂದ ಅರ್ಜಿಗಳಲ್ಲಿ ಬಹುತೇಕವಾಗಿ ಕಂದಾಯ, ಪೆÇಲೀಸ್ ಇಲಾಖೆ, ಗೃಹಲಕ್ಷ್ಮಿ ಯೋಜನೆ, ಬಿಬಿಎಂಪಿ, ಪಿಂಚಣಿ, ಗ್ರಾಚ್ಯುಟಿ ಇತ್ಯರ್ಥ, ವಸತಿ ಕೊಡಿ, ಉದ್ಯೋಗ ಕೊಡಿಸಿ ಎಂಬ ಮನವಿಗಳು ಬಂದಿವೆ. ಅಂಗವಿಕಲರು ಉದ್ಯೋಗ ಕೊಡಿಸಿ, ತ್ರಿಚಕ್ರ ವಾಹನ ಕೊಡಿಸಿ ಎಂದು ಮನವಿ ಸಲ್ಲಿಸಿದ್ದಾರೆ. 4000 ತ್ರಿಚಕ್ರ ವಾಹನ ಒದಗಿಸಲಾಗಿದೆ ಎಂದರು

ವಿಶೇಷವಾಗಿ ಜಿಲ್ಲಾಧಿಕಾರಿಗಳು ಸ್ಥಳೀಯವಾಗಿಯೇ ಖಾತೆ, ಪಹಣಿಯಂತಹ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಜಿಲ್ಲಾಧಿಕಾರಿಗಳು, ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿದರೆ ಜನರು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಕಾನೂನು ರೀತ್ಯ ಮಾಡಲು ಸಾಧ್ಯವಾಗದಿದ್ದರೆ, ಹಿಂಬರಹ ನೀಡಬೇಕು. ಈ ಕುರಿತು ಎಲ್ಲ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಸ್ಪತ್ರೆ, ಪೆÇಲೀಸ್ ಠಾಣೆ, ಹಾಸ್ಟೆಲುಗಳು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿದರು.

ಜನತಾ ದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿ ಸ್ವೀಕರಿಸಲಾಗಿದ್ದು, ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ಹದಿನೈದು ದಿನದೊಳಗೆ ಇವುಗಳನ್ನು ವಿಲೇವಾರಿ ಮಾಡಬೇಕು. ನಿಯಮಾವಳಿಗಳಡಿ ಅವಕಾಶವಿಲ್ಲದೆ ಇದ್ದರೆ, ಹಿಂಬರಹ ನೀಡಬೇಕು. ಕನಿಷ್ಠ ಮೂರು ತಿಂಗಳಿಗೊಮ್ಮೆ ಜನತಾಸ್ಪಂದನ ಕಾರ್ಯಕ್ರಮ ಮಾಡುತ್ತೇನೆ. ಮುಂದಿನ ಬಾರಿ ಹೆಚ್ಚು ಜನ ಬಂದರೆ, ತಳಹಂತದ ಅಧಿಕಾರಿಗಳು ಕೆಲಸ ಸರಿಯಾಗಿ ಮಾಡುತ್ತಿಲ್ಲ ಎಂದು ಪರಿಗಣಿಸಲಾಗುವುದು ಹಾಗೂ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Leave a Comment

Your email address will not be published. Required fields are marked *