Ad Widget .

ಹಾವೇರಿ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಬೆಂಕಿ ಹಚ್ಚಿಕೊಂಡು ಪಿಯುಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಮೃತರನ್ನು ಹಾನಗಲ್ ಪಟ್ಟಣದ ಎನ್ ಸಿಜೆಸಿ ಕಾಲೇಜಿನ ಪ್ರಥಮ ಪಿಯಸಿ ವಿದ್ಯಾರ್ಥಿ ಆದಿತ್ಯ ರಘುವೀರ ಚವ್ಹಾಣ ಎಂದು ಗುರುತಿಸಲಾಗಿದೆ.

Ad Widget . Ad Widget .

ಮಂಗಳವಾರ ಸಂಜೆ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಾಂಶುಪಾಲರ ಕಿರುಕುಳಕ್ಕೆ ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪ್ರಾಂಶುಪಾಲೆ ಅನಿತಾ ಹೊಸಮನಿ ವಿರುದ್ಧ ಆರೋಪ ಕೇಳಿಬಂದಿದ್ದು, ಆದಿತ್ಯ ಕಾಲೇಜಿಗೆ ಸರಿಯಾಗಿ ಹೋಗುತ್ತಿರಲಿಲ್ಲ, ಇದಕ್ಕೆ ಪ್ರಿನ್ಸಿಪಾಲರು ಕರೆದು ಬುದ್ಧಿ ಹೇಳಿದ್ದರು ಎನ್ನಲಾಗಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *