November 2023

ಕುಮಾರ್ ಪೆರ್ನಾಜೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರು ಸಂಸ್ಥೆಯ ಸಲಹಾ ಸಮಿತಿಗೆ ನೇಮಕ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16ರಂದು ಮಂಗಳೂರಿನ ಮರೋಲಿ ಸೂರ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೃಷಿ ಸಂಶೋಧನಾ ಪ್ರಶಸ್ತಿ ಪುರಸ್ಕೃತರು, ಜಿಲ್ಲಾ ರಾಜ್ಯೋತ್ಸವ, ಹವ್ಯಕರತ್ನ, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಜಿಲ್ಲಾ ಮಟ್ಟದ ಪ್ರಗತಿ […]

ಕುಮಾರ್ ಪೆರ್ನಾಜೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರು ಸಂಸ್ಥೆಯ ಸಲಹಾ ಸಮಿತಿಗೆ ನೇಮಕ Read More »

Yes Bankನಲ್ಲಿ ಕೆಲಸ ಇದೆ! ಆಸಕ್ತರು ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ Yes Bankನಲ್ಲಿ ಜಾಬ್​ ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಮ್ಯಾನೇಜರ್, ಸೀನಿಯರ್ ಸೇಲ್ಸ್​ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 20, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ.ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.https://yesforyou.darwinbox.in/ms/candidate/careers Online ಮೂಲಕ ಅಪ್ಲೇ ಮಾಡಿ.ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸಂಬಳ ; ಇನ್ನೂ

Yes Bankನಲ್ಲಿ ಕೆಲಸ ಇದೆ! ಆಸಕ್ತರು ಬೇಗ ಅರ್ಜಿ ಸಲ್ಲಿಸಿ Read More »

ನಾಳೆ ವಿಶ್ವಕಪ್ ಫೈನಲ್‌/ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್‌ ಮಾರ್ಲ್ಸ್ ಉಪಸ್ಥಿತಿ

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್‌ನ ಅಂತಿಮ ಹಣಾಹಣಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಭಾನುವಾರ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಹಲವಾರು ಗಣ್ಯರು ಸಾಕ್ಷಿಯಾಗಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್‌ ಮಾರ್ಲ್ಸ್ ಈ ಪಂದ್ಯಾಟವನ್ನು ವೀಕ್ಷಿಸಲಿದ್ದಾರೆ ಎಂದು ಗುಜರಾತ್ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಈ ಕುರಿತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಕಚೇರಿ ಪ್ರಕಟಣೆ ಹೊರಡಿಸಿದ್ದು, ಭದ್ರತೆ, ಸಂಚಾರ ನಿರ್ವಹಣೆ, ಸ್ವಚ್ಛತೆ ಮತ್ತು ಹೆಚ್ಚಿನ

ನಾಳೆ ವಿಶ್ವಕಪ್ ಫೈನಲ್‌/ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್‌ ಮಾರ್ಲ್ಸ್ ಉಪಸ್ಥಿತಿ Read More »

ಕುಕ್ಕೆ ಸುಬ್ರಹ್ಮಣ್ಯ: ಗರ್ಭಗುಡಿಯ ಫೋಟೋ ಜೊತೆ ಅರ್ಚಕರ‌ ಮೇಲೆ ನಿಂದನಾತ್ಮಕ ಬರಹ; ದೂರು ದಾಖಲು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭ ಗುಡಿಯ ಪೋಟೋ ತೆಗೆದಿದ್ದಾರೆ. ಅಲ್ಲದೆ ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ

ಕುಕ್ಕೆ ಸುಬ್ರಹ್ಮಣ್ಯ: ಗರ್ಭಗುಡಿಯ ಫೋಟೋ ಜೊತೆ ಅರ್ಚಕರ‌ ಮೇಲೆ ನಿಂದನಾತ್ಮಕ ಬರಹ; ದೂರು ದಾಖಲು Read More »

ಸಂಪಾಜೆ: ವಲಯ ಅರಣ್ಯಾಧಿಕಾರಿ ಮಧುಸೂದನ್ ಎಂ.ಕೆ ಅವರಿಗೆ ಬೀಳ್ಕೊಡುಗೆ

ಸಮಗ್ರ ನ್ಯೂಸ್: ಸಂಪಾಜೆ ಪ್ರಾದೇಶಿಕ ವಲಯದ ವಲಯ ಅರಣ್ಯಾಧಿಕಾರಿ ಮಧುಸೂದನ್ ಎಂ.ಕೆ ಅವರನ್ನು ನ. 17ರಂದು ಸಂಪಾಜೆ ವಲಯದ ವತಿಯಿಂದ ಬೀಳ್ಕೊಡಲಾಯಿತು. 2019ರ ನವಂಬರ್ ತಿಂಗಳಿನಲ್ಲಿ ಸಂಪಾಜೆ ವಲಯಕ್ಕೆ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಬಂದು ದಕ್ಷ ಅಧಿಕಾರಿಯಾಗಿ, ಸಮಾಜಮುಖಿಯಾಗಿ, ಮಾನವೀಯ ಮೌಲ್ಯಗಳ ಗಣಿಯಾಗಿ, ಸದಾಕಾಲ ಸಿಬ್ಬಂದಿಗಳ ಸ್ಪೂರ್ತಿಯ ಚಿಲುಮೆಯಾಗಿ, ಅಭಿವೃದ್ಧಿ ಕಾರ್ಯಗಳ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡು ಸಿಬ್ಬಂದಿಗಳ ಹಾಗೂ ಗ್ರಾಮಸ್ಥರ ಮನಸ್ಸಿನಲ್ಲಿ ಶಾಶ್ವತವಾಗಿ ಸ್ಥಾನ ಪಡೆದಿರುವ ಮಧುಸೂದನ್ ಎಂ.ಕೆ. ಇವರು ಸುದೀರ್ಘ ನಾಲ್ಕು

ಸಂಪಾಜೆ: ವಲಯ ಅರಣ್ಯಾಧಿಕಾರಿ ಮಧುಸೂದನ್ ಎಂ.ಕೆ ಅವರಿಗೆ ಬೀಳ್ಕೊಡುಗೆ Read More »

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ| 71 ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದು ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ. ಯಾವುದೇ

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ| 71 ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ Read More »

ಪುತ್ತೂರು ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ವರ್ಗಾವಣೆ

ಸಮಗ್ರ ನ್ಯೂಸ್: ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಆದೇಶದಲ್ಲಿರುವ ಅರುಣ್ ನಾಗೇಗೌಡ ಅವರನ್ನು ಪುತ್ತೂರು ಡಿವೈಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ ಸಿಐಡಿಗೆ ವರ್ಗಾವಣೆಗೊಳಿಸಿತ್ತು. ಆ ಬಳಿಕ ಅವರ ವರ್ಗಾವಣೆ ರದ್ದುಗೊಳಿಸಿ ಎಸ್ಪಿ ಕಚೇರಿಯ ಡಿಸಿಆರ್‌ಬಿ ಡಿವೈಎಸ್ಪಿಯಾಗಿ ನಿಯೋಜಿಸಲಾಗಿತ್ತು. ಪುತ್ತೂರಿನಲ್ಲಿ ನಡೆದ ಬ್ಯಾನರ್ ಪ್ರಕರಣವೊಂದಕ್ಕೆ ಸಂಬಂಧಿಸಿ

ಪುತ್ತೂರು ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ವರ್ಗಾವಣೆ Read More »

ವಾಹನಗಳ HSRP ನಂಬರ್ ಪ್ಲೇಟ್ ಬದಲಾವಣೆ ಅವಧಿ ವಿಸ್ತರಣೆ| ಯಾವಾಗ ಲಾಸ್ಟ್ ಡೇಟ್ ಗೊತ್ತಾ?

ಸಮಗ್ರ ನ್ಯೂಸ್: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17ರೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು ಎಂಬ ಆದೇಶ ಹೊರಡಿಸಲಾಗಿತ್ತು. ಆದರೆ ಈಗ ಗಡುವು ವಿಸ್ತರಣೆ ಮಾಡಲಾಗಿದೆ. ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯಲ್ಲಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿದ್ದರಿಂದ ಡೆಡ್ ಲೈನ್ ನನ್ನು ಫೆಬ್ರವರಿ 17ರವರೆಗೆ ವಿಸ್ತರಿಸಲಾಗಿದೆ. 2019ಕ್ಕಿಂತ ಮೊದಲು ನೋಂದಣಿಯಾದ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ,

ವಾಹನಗಳ HSRP ನಂಬರ್ ಪ್ಲೇಟ್ ಬದಲಾವಣೆ ಅವಧಿ ವಿಸ್ತರಣೆ| ಯಾವಾಗ ಲಾಸ್ಟ್ ಡೇಟ್ ಗೊತ್ತಾ? Read More »

ಲವ್, ಸೆಕ್ಸ್ ಮತ್ತು‌ ದೋಖಾ| ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ಮೇಲೆ ಬಿತ್ತು‌ ಎಫ್ಐಆರ್

ಸಮಗ್ರ ನ್ಯೂಸ್: ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ವಿರುದ್ಧ ಈಗ ಯುವತಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಅಲ್ಲದೇ ಯುವತಿ ಪೊಲೀಸರಿಗೆ ನೀಡಿದಂತ ದೂರು ಆಧರಿಸಿ, ಎಫ್ ಐಆರ್ ಕೂಡ ದಾಖಲಾಗಿದೆ. ಮೈಸೂರಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಗೆ ಪಾರ್ಟಿಯೊಂದರಲ್ಲಿ ಸಂತ್ರಸ್ತ ಯುವತಿ ಪರಿಚಯವಾಗಿದ್ದರು. ಪರಿಚಯ ಸ್ನೇಹ, ಆನಂತರ ಪ್ರೀತಿಗೆ ತಿರುಗಿತ್ತು. ಬಳಿಕ ಇಬ್ಬರ ನಡುವೆ ಲವ್ವಿಡವ್ವಿಯಾಗಿದೆ. ಯುವತಿಯನ್ನು ಕಳೆದ ಜನವರಿಯಲ್ಲಿ ಹೋಟೆಲ್ ಗೆ ಕರೆದುಕೊಂಡು ಹೋಗಿದ್ದ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್,

ಲವ್, ಸೆಕ್ಸ್ ಮತ್ತು‌ ದೋಖಾ| ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ಮೇಲೆ ಬಿತ್ತು‌ ಎಫ್ಐಆರ್ Read More »

ಹವಾಮಾನ ವರದಿ| ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಚಾಮರಾಜ ನಗರ ಜಿಲ್ಲೆಗಳಲ್ಲಿ ಇಂದು (ನ.18) ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ವಾರಾಂತ್ಯದಲ್ಲಿ ದಕ್ಷಿಣ

ಹವಾಮಾನ ವರದಿ| ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »