ಬೆಳ್ತಂಗಡಿ: ಗರ್ಭವತಿಯಾದ ಖಾಸಗಿ ಕಾಲೇಜು ವಿದ್ಯಾರ್ಥಿನಿ| ಪ್ರಭಾವಕ್ಕೆ ಒಳಗಾಗಿ ಪೋಕ್ಸೋ ದಾಖಲಿಸದ ಪೊಲೀಸರು – ಗಿರೀಶ್ ಮಟ್ಟಣ್ಣನವರ್
ಸಮಗ್ರ ನ್ಯೂಸ್: ‘ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ (ಪೊಕ್ಸೊ) ಜಿಲ್ಲೆಯ ಠಾಣೆಯೊಂದರಲ್ಲಿ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತೆಯು ತನ್ನ ಮೊದಲ ಹೇಳಿಕೆ ನೀಡಿದಾಗ ಹೆಸರಿಸಿದ ಆರೋಪಿ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಈ ಪ್ರಕರಣದ ತನಿಖೆಯನ್ನು ದಾರಿತಪ್ಪಿಸಲಾಗುತ್ತಿದೆ’ ಎಂದು ಗಿರೀಶ್ ಮಟ್ಟಣ್ಣನವರ್ ಆರೋಪಿಸಿದರು. ‘ಬಾಲಕಿಯನ್ನು ಆರೋಗ್ಯ ತಪಾಸಣೆಗಾಗಿ ಇಲ್ಲಿನ ಲೇಡಿಗೋಷನ್ ಆಸ್ಪತ್ರೆಗೆ ಕರೆತಂದಾಗ ಆಕೆ ಮೇಲೆ ನಡೆದ ಲೈಂಗಿಕ ದೌರ್ಜನ್ಯದಿಂದ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಆಸ್ಪತ್ರೆಯ ವೈದ್ಯರು ನೀಡಿದ ಮಾಹಿತಿ ಆಧಾರದಲ್ಲಿ ಜಿಲ್ಲೆಯ ಮಹಿಳಾ […]