November 2023

ಗುರುವಾಯೂರು: ಮಾವುತನನ್ನೇ ತಿವಿದು ಕೊಂದ ಚಂದ್ರಶೇಖರನ್

ಕೇರಳದ ಪುನ್ನತ್ತೂರು ಕೊಟ್ಟಾದಲ್ಲಿರುವ ಗುರುವಾಯೂರು ದೇವಸ್ವಂನ ಆನೆ ಶಿಬಿರದಲ್ಲಿ ಆನೆಯೊಂದು ತನ್ನ ಸಹಾಯಕ ಮಾವುತನನ್ನೇ ತುಳಿದು ಕೊಂದಿರುವ ಘಟನೆ ವರದಿಯಾಗಿದೆ. ಚಂದ್ರಶೇಖರನ್‌ ಎಂಬ ಹೆಸರಿನ ಒಂಟಿ ದಂತದ ಆನೆಯು ಅಶಿಸ್ತಿನಿಂದ ವರ್ತಿಸುತ್ತಿತ್ತಲ್ಲದೇ, ಅಪಾಯಕಾರಿಯಾಗಿಯೂ ತೋರುತ್ತಿದ್ದ ಕಾರಣ ಅದನ್ನು ಎಂದಿಗೂ ಶಿಬಿರದಿಂದ ಹೊರಗೆ ಕರೆತಂದಿರಲಿಲ್ಲ. ಬುಧವಾರ ಮಧ್ಯಾಹ್ನ ರತೀಶ್‌ ಎಂಬ ಮಾವುತ ಆನೆಗೆ ನೀರು ಕುಡಿಸಲು ಹೋದಾಗ ಆತ ತನಗೆ ತೊಂದರೆ ನೀಡಲು ಬಂದಿದ್ದಾನೆಂದು ಭಾವಿಸಿ ತುಳಿದುಬಿಟ್ಟಿದೆ. ರತೀಶ್‌ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟದ್ದಾರೆ. ಆನೆ ಮೊದಲಿನಿಂದಲೂ […]

ಗುರುವಾಯೂರು: ಮಾವುತನನ್ನೇ ತಿವಿದು ಕೊಂದ ಚಂದ್ರಶೇಖರನ್ Read More »

ಸುಳ್ಯ: ವಿದ್ಯಮಾತಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಶಾಖೆಯ ಉದ್ಘಾಟನೆಯು

ಸಮಗ್ರ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವಿದ್ಯಮಾತಾ ಅಕಾಡೆಮಿ ಸುಳ್ಯ ಶಾಖೆಯ ಉದ್ಘಾಟನೆಯು ನ. 9ರಂದು ವಿದ್ಯಾಮಾತಾ ಅಕಾಡೆಮಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಮೇಜ‌ರ್ ಡಾ.ಕುಶ್ವಂತ್‌ ಕೋಳಿಬೈಲು, ತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ಸುಳ್ಯ ಟಿಎಪಿಸಿಎಂಎಸ್‌ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೆಪ್ಟೆಂಬರ್ 28 ರಂದು ಶುಭಾರಂಭಗೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ನ. 8ರಂದು ಪ್ರವೇಶಾತಿಯನ್ನು ಪಡೆದುಕೊಂಡಿರುವ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಿಗಾಗಿ

ಸುಳ್ಯ: ವಿದ್ಯಮಾತಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಶಾಖೆಯ ಉದ್ಘಾಟನೆಯು Read More »

ಟಿಪ್ಪು ಜಯಂತಿ ಆಚರಣೆ ಸರ್ಕಾರದ ಮುಂದಿಲ್ಲ – ಹೆಚ್ ಕೆ ಪಾಟೀಲ್

ಸಮಗ್ರ ನ್ಯೂಸ್: ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಬಾರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ

ಟಿಪ್ಪು ಜಯಂತಿ ಆಚರಣೆ ಸರ್ಕಾರದ ಮುಂದಿಲ್ಲ – ಹೆಚ್ ಕೆ ಪಾಟೀಲ್ Read More »

ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ| ಆರೋಪಿಗಳು ಗಾಂಜಾ ಸೇವಿಸಿದ್ರಾ? ಎಸ್ಪಿ ರಿಷ್ಯಂತ್ ಹೇಳಿದ್ದೇನು?

ಸಮಗ್ರ ನ್ಯೂಸ್: ಕಲ್ಲೇಗ ಟೈಗರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ. ನವೆಂಬರ್ 6 ರಂದು ಪುತ್ತೂರಿನ ಹೊರವಲಯದ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರು ದುಷ್ಕರ್ಮಿಗಳು ತಲವಾರ್ ನಿಂದ ಹಲ್ಲೆ ನಡೆಸಿದ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ| ಆರೋಪಿಗಳು ಗಾಂಜಾ ಸೇವಿಸಿದ್ರಾ? ಎಸ್ಪಿ ರಿಷ್ಯಂತ್ ಹೇಳಿದ್ದೇನು? Read More »

ಆಟೋ – ಟ್ಯಾಂಕರ್ ನಡುವೆ ಭೀಕರ ಅಪಘಾತ| ಸ್ಥಳದಲ್ಲೇ ನಾಲ್ವರು ಸಾವು

ಸಮಗ್ರ ನ್ಯೂಸ್: ಆಟೋ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ. ವಾಡಿ ಪಟ್ಟಣದಿಂದ ನಾಲವಾರ ಕಡೆ ತೆರಳುತ್ತಿದ್ದ ಆಟೋಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲವಾರ ಗ್ರಾಮದ ವಾರ್ಡ್ ನಂ.1 ಅಕಾನಿ ಮಸ್ಜಿದ್ ಹತ್ತಿರದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ

ಆಟೋ – ಟ್ಯಾಂಕರ್ ನಡುವೆ ಭೀಕರ ಅಪಘಾತ| ಸ್ಥಳದಲ್ಲೇ ನಾಲ್ವರು ಸಾವು Read More »

ಭಾರೀಮಳೆ,‌ಭೂಕುಸಿತ ಹಿನ್ನಲೆ| ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಈಶಾನ್ಯ ಮಾನ್ಸೂನ್ ಮಾರುತವು ಬಿರುಸು ಪಡೆದಿದ್ದು, ತಮಿಳುನಾಡಿನ‌ ಕೊಯಂಬತ್ತೂರು, ತಿರುಪ್ಪೂರು, ಮಧುರೈ, ಥೇಣಿ, ದಿಂಡಿಗಲ್ ಸೇರಿದಂತೆ ಐದು ಜಿಲ್ಲೆಗಳು ಹಾಗೂ ನೀಲಗಿರಿ ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿನ ಶಾಲಾ ಕಾಲೇಜುಗಳಿಗೆ ಗುರುವಾರದಂದು ರಜೆ ಘೋಷಿಸಲಾಗಿದೆ. ಭಾರಿ ಮಳೆಯಿಂದ ನೀಲಗಿರಿ ಜಿಲ್ಲೆಯ ಕೋಟಾಗಿರಿ-ಮೆಟ್ಟುಪಾಳ್ಯಂ ರಸ್ತೆಯಲ್ಲಿ ಭೂಕುಸಿತವಾಗಿದ್ದು, ಇದರಿಂದ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ನಂತರ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೆ ಬೇರೆ ಮಾರ್ಗವಾಗಿ ಪ್ರಯಾಣಿಸಲು ವ್ಯವಸ್ಥೆ ಮಾಡಲಾಯಿತು. ಪರಿಹಾರ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ನಡುವೆ, ಭಾರಿ ಮಳೆಯಿಂದಾಗಿ ಕಲ್ಲರ್ ಮತ್ತು

ಭಾರೀಮಳೆ,‌ಭೂಕುಸಿತ ಹಿನ್ನಲೆ| ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸುಳ್ಯ: ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣ| ಬಂಧಿತರಲ್ಲಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಐಸ್ ಕ್ರೀಂ ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯಾ ಮಾವ ಗಿರಿಯಪ್ಪ ಗೌಡ ಕಾಪಿಲ, ಅತ್ತೆ ,ಸೀತಮ್ಮ, ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ

ಸುಳ್ಯ: ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣ| ಬಂಧಿತರಲ್ಲಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕುಕ್ಕೆ ಸುಬ್ರಹ್ಮಣ್ಯ: ಸರ್ಪಸಂಸ್ಕಾರಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ. ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು. ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು.

ಕುಕ್ಕೆ ಸುಬ್ರಹ್ಮಣ್ಯ: ಸರ್ಪಸಂಸ್ಕಾರಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು Read More »

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಬರೆಗೆ ಅಪ್ಪಳಿಸಿದ KSRTC ಬಸ್

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಪಕ್ಕದ ಬರೆಗೆ ಅಪ್ಪಳಿಸಿದ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಕೆದಕಲ್ ಬಳಿ ನಡೆದಿದೆ. ಅದೃಷ್ಟವಶಾತ್ ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಬರೆಗೆ ಅಪ್ಪಳಿಸಿದ KSRTC ಬಸ್ Read More »

ಮಡಿಕೇರಿ: ಡೆತ್ ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

ಸಮಗ್ರ ನ್ಯೂಸ್: ಡೆತ್ ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆಯಾಗಿರುವ ಘಟನೆ ಮಡಿಕೇರಿಯ ಪಂಪಿನ ಕೆರೆ ಎಂಬಲ್ಲಿ ವರದಿಯಾಗಿದೆ. ನಿವೃತ ಯೋಧ ಸಂದೇಶ್ (೩೮) ಅವರು ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದು, ಮಡಿಕೇರಿ ನಗರದ ಹೊರವಲಯದಲ್ಲಿರುವ ಪಂಪಿನ ಕೆರೆಯ ಬಳಿ ಆತನ ಪಾದರಕ್ಷೆ ಹಾಗು ಸೆಲ್ ಫೋನ್ ಸಿಕ್ಕಿರುವ ಹಿನ್ನಲೆ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಪೊಲೀಸರು ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಮಡಿಕೇರಿಯ ಉಕ್ಕುಡ ನಿವಾಸಿಯವಿರುವ ಸಂದೇಶ್ ಎರಡು ತಿಂಗಳ

ಮಡಿಕೇರಿ: ಡೆತ್ ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ Read More »