ಉದ್ಯೋಗಾಕಾಂಕ್ಷಿಗಳೇ ಇಲ್ಲಿ ಗಮನಿಸಿ/ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ರಿಸಾಲ್ವರ್ ಹುದ್ದೆಗಳ ನೇಮಕಾತಿ
ಸಮಗ್ರ ನ್ಯೂಸ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ರಿಸಾಲ್ವರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 94 ಹುದ್ದೆಗಳು ಖಾಲಿ ಇದ್ದು, ಆರ್ಹ ಅಭ್ಯರ್ಥಿಗಳು ನವೆಂಬರ್ 21, 2023ರ ಒಳಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಗತ್ಯವಾದ ವಿದ್ಯಾರ್ಹತೆಯ ಜೊತೆಗೆ ನವೆಂಬರ್ 1, 2023ರ ಅನ್ವಯವಾಗುವಂತೆ ಗರಿಷ್ಟ 65 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.