ವಿದೇಶಿ ಆತಿಥ್ಯ ಸ್ವೀಕಾರ/ ಸಂಸದರಿಗೆ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯ

ಸಮಗ್ರ ನ್ಯೂಸ್: ಭಾರತದ ಸಂಸತ್ತಿನ ಸದಸ್ಯರು ಖಾಸಗಿಯಾಗಿ ವಿದೇಶಗಳಿಗೆ ತೆರಳಿದ ಸಂದರ್ಭಗಳಲ್ಲಿ, ಅಲ್ಲಿನ ಆತಿಥ್ಯ ಸ್ವೀಕರಿಸುವ ಮುನ್ನ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಬೇಕು. ಹಾಗೇಯೇ ಸರ್ಕಾರದ ಕಠಿಣ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ರಾಜ್ಯಸಭಾ ಸಚಿವಾಲಯ ಆದೇಶ ಹೊರಡಿಸಿದೆ.

Ad Widget ... ..

ವಿದೇಶಗಳಿಂದ ಬರುವ ಆಹ್ವಾನವನ್ನು ಕಡ್ಡಾಯವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಗಮನಕ್ಕೆ ತರಬೇಕು ಸಂಸದರಾಗಿ ತಾವು ನಿರ್ವಹಿಸಬೇಕಿರುವ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಅಡ್ಡಿ ಉಂಟುಮಾಡಬಹುದಾದ ಉಡುಗೊರೆಗಳನ್ನು ಪಡೆಯಬಾರದು. ಸಂಸದರು ನೀತಿಸಂಹಿತೆ ಪಾಲಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

Ad Widget

Leave a Comment

Your email address will not be published. Required fields are marked *