ಸಮಗ್ರ ನ್ಯೂಸ್: ವಿಶ್ವಸಂಸ್ಥೆಯ ಕಾನ್ಸರೆನ್ಸ್ ಆಫ್ ಪಾರ್ಟೀಸ್ (ಸಿಒಪಿ-28) ಜತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದುಬೈ ಪ್ರವಾಸ ಕೈಗೊಂಡಿದ್ದಾರೆ. ‘ಸಿಒಪಿ-28 ಶೃಂಗಸಭೆಯಲ್ಲಿ ಭಾಗವಹಿಸಲು ದುಬೈಗೆ ಬಂದಿಳಿದಿದ್ದೇನೆ. ಸಭೆಯ ಕಾರ್ಯಕಲಾಪಗಳನ್ನು ಎದುರು ನೋಡುತ್ತಿದ್ದೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಯುಎಇ ಉಪ ಪ್ರಧಾನಿ ಶೇಖ್ ಸೈಫ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಪ್ರಧಾನಿ ಅವರನ್ನು ದುಬೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ದುಬೈನಲ್ಲಿರುವ ಭಾರತೀಯ ಸಮುದಾಯದವರು ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ‘ಅವರ ಸ್ವಾಗತದಿಂದ ನಾನು ತೀವ್ರ ಭಾವುಕನಾಗಿದ್ದೇನೆ. ಅವರ ಬೆಂಬಲ ಮತ್ತು ಉತ್ಸಾಹ ನಮ್ಮ ಸಂಸ್ಕøತಿ ಮತ್ತು ಬಂಧಗಳಿಗೆ ಸಾಕ್ಷಿಯಾಗಿದೆ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.