2024ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆ/ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್: 2024ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 4ರವರೆಗೆ ವಿಸ್ತರಿಸಲಾಗಿದೆ.

. Ad Widget . Ad Widget . Ad Widget

2024ರ ಜನವರಿ 24 ರಿಂದ ಫೆಬ್ರವರಿ 01ರ ನಡುವೆ 2024ರ ಜೆಇಇ ಮೇನ್ಸ್ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ನವೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದ್ದು, ಡಿಸೆಂಬರ್ 4ರೊಳಗೆ ಅರ್ಜಿ ಸಲ್ಲಿಸಬಹುದು.

. Ad Widget .

ಬಿಇ, ಬಿ.ಟೆಕ್, ಬಿ.ಆರ್ಚ್, ಬಿ ಪ್ಲಾನಿಂಗ್ ಕೋರ್ಸ್‍ಗಳ ಪ್ರವೇಶಾತಿಗಾಗಿ ಜೆಇಇ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿ ಒಟ್ಟು 13 ಭಾಷೆಗಳಲ್ಲಿ ಪರೀಕ್ಷೆಯನ್ನು ಬರೆಯಬಹುದಾಗಿದೆ.

Leave a Comment

Your email address will not be published. Required fields are marked *