ಸಮಗ್ರ ನ್ಯೂಸ್: ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇಂದು(ಡಿ.2) ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ(ಡಿ.3) ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ.
ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ.
ಒಟ್ಟು ೧೫ ದಿನಗಳ ಕಲಾಪ ನಡೆಯಲಿದ್ದು, ಡಿಸೆಂಬರ್ ೨೨ರಂದು ಅಧಿವೇಶನ ಮುಕ್ತಾಯಗೊಳ್ಳಲಿದೆ. ಸಂಸತ್ತಿನಲ್ಲಿ ರಚನಾತ್ಮಕ ಚರ್ಚೆ ನಡೆಸಲು ಪ್ರತಿಪಕ್ಷಗಳು ಬೆಂಬಲ ನೀಡುವಂತೆ ಸಚಿವರು ಮನವಿ ಮಾಡಿದ್ದಾರೆ. ಯಾವುದೇ ವಿಷಯದ ಕುರಿತು ಚರ್ಚೆಗೆ ಸರ್ಕಾರ ಮುಕ್ತವಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ