Ad Widget .

ನಾಳೆ(ಡಿ.3) ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ

ಸಮಗ್ರ ನ್ಯೂಸ್: ಹೊಸ ರೇಷನ್ ಕಾರ್ಡ್ ಗೆ ಡಿಸೆಂಬರ್.3ರಂದು ರಾಜ್ಯಾಧ್ಯಂತ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget . Ad Widget .

ರೇಷನ್ ಕಾರ್ಡ್ ತಿದ್ದುಪಡಿಗಾಗಿ ನ.29ರ ಹಾಗೂ ನ.30ರವರೆಗೆ ಎರಡು ದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಅವಕಾಶ ನೀಡಲಾಗಿತ್ರು.

Ad Widget . Ad Widget .

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು. 6 ವರ್ಷದ ಒಳಗಿನ ಮಕ್ಕಳಿದ್ದರೇ ಜನನ ಪ್ರಮಾಣಪತ್ರವನ್ನು ಹೆಸರು ಸೇರ್ಪಡೆಗೆ ಬೇಕು. 6 ವರ್ಷ ಮೇಲ್ಪಟ್ಟವರಿಗೆ ಪ್ರಸಕ್ತ ಸಾಲಿನ ಜಾತಿ ಪ್ರಮಾಣಪತ್ರ ಅದು ಐದು ವರ್ಷಕ್ಕಿಂತ ಒಳಗೆ ಇರುವಂತ ದಾಖಲೆಗಳನ್ನು ನೀಡಬೇಕು ಎಂದಿದೆ.

ಹೊಸ BPL, APL ಕಾರ್ಡ್ ಗಳಿಗಾಗಿ ಡಿ.3ರಂದು ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳಿಗೆ ತೆರಳಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.

Leave a Comment

Your email address will not be published. Required fields are marked *