ಹುಸಿಬಾಂಬ್ ಬೆದರಿಕೆ ಹಿನ್ನಲೆ| ಇಂದು ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಡಿಸಿ

ಸಮಗ್ರ ನ್ಯೂಸ್: ಹುಸಿ ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.

Ad Widget ... ..

ನಗರದ ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ ಎನ್ನುವುದು ಖಚಿತವಾಗಿರುವ ಹಿನ್ನೆಲೆ ಶನಿವಾರ ಶಾಲೆಗಳಿಗೆ ರಜೆ ಇರುವುದಿಲ್ಲ. ಬೆಂಗಳೂರಿನ ಎಲ್ಲಾ ಶಾಲೆಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ದಯಾನಂದ್ ಸ್ಪಷ್ಟಪಡಿಸಿದ್ದಾರೆ.

Ad Widget

60ಕ್ಕೂ ಹೆಚ್ಚು ಶಾಲೆಗಳಿಗೆ ಮೇಲ್ ಬಂದಿವೆ. ಯಾವ ರೀತಿಯ ಆತಂಕ ಪಡುವಂತಿಲ್ಲ. ನಾವು ಶಾಲೆಗೆ ರಜೆ ನೀಡಿಲ್ಲ. ಯಾವುದೇ ತುರ್ತು ಅನಿವಾರ್ಯತೆ ಇದ್ದರೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡುತ್ತದೆ ಎಂದಿದ್ದಾರೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣದ ತನಿಖೆಗೆ ಸರ್ಕಾರ ಕ್ರಮ ವಹಿಸಿದೆ. ಯಾವುದೇ ಗಂಭೀರತೆ ಇಲ್ಲ, ಆದ್ದರಿಂದ ಇಂದು ಶನಿವಾರ ಶಾಲಾ-ಕಾಲೇಜಿಗಳಿಗೆ ರಜೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಮಗ್ರ ತನಿಖೆಗೆ ಕೂಡ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *