ಸಮಗ್ರ ನ್ಯೂಸ್: ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ನಿಗದಿಯಾಗಿದ್ದ ಮರು ಪರೀಕ್ಷೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದೂಡಲಾಗಿದೆ. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಜ. 23ಕ್ಕೆ ಮುಂದೂಡಿರುವುದಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದರು.
545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ಇಡೀ ನೇಮಕಾತಿಯೇ ರದ್ದಾಗಿತ್ತು. ಮರು ಪರೀಕ್ಷೆ ನಡೆಸಬೇಕೆಂಬ ಸರ್ಕಾರದ ಮನವಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತು. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮರು ಪರೀಕ್ಷಾ ದಿನಾಂಕವನ್ನು ಡಿ.23ಕ್ಕೆ ನಿಗದಿ ಮಾಡಿತ್ತು,
ಆದರೆ ದಿನಾಂಕ ಮುಂದೂಡಬೇಕೆಂಬ ಕೂಗುಗಳು ಕೇಳಿಬಂದಿದ್ದವು. ಇಂದು ಸದನದಲ್ಲೂ ಇದೇ ಆಗ್ರಹಗಳು ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಜ. 23ಕ್ಕೆ ಮುಂದೂಡಿದ್ದಾರೆ.