Ad Widget .

ಬಿಎಂಟಿಸಿ ಬಸ್ ಗೆ ಗುದ್ದಿ ಧಗಧಗನೆ ಹೊತ್ತಿ ಉರಿದ ಕಾರ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಸುಮಾರು 9 ಗಂಟೆ ಸುಮಾರಿಗೆ ಚಂದ್ರಾಲೇಔಟ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಬಸ್ ಯಶವಂತಪುರದಿಂದ ನಾಯಂಡಹಳ್ಳಿ ಕಡೆ ತೆರಳುತ್ತಿತ್ತು.
ಚಂದ್ರಾ ಲೇಔಟ್ ಬಳಿ ಬಸ್ ನಿಂತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ವೇಗಕ್ಕೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಹಿಂಭಾಗದ ಸೀಟು ಸಂಪೂರ್ಣ ಬೆಂಕಿಗಾಹುತಿ ಆಗಿದೆ. ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ.

Ad Widget . Ad Widget .

ಕಾರ್ ಡಿಕ್ಕಿ ಹೊಡೆಯುತ್ತಿದ್ದಂತೆ ಎಚ್ಚೆತ್ತ ಚಾಲಕ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ನಂತರ ಬೆಂಕಿ ಹತ್ತಿಕೊಂಡಿದ್ರೂ ಕಾರ್ ಬೇರ್ಪಡಿಸಲು ಸುಮಾರು 100 ಮೀಟರ್ ವರೆಗೆ ಬಸ್ ಚಲಾಯಿಸಿದ್ದಾರೆ. ಬಸ್ ಅನ್ನು ಪುಟ್ ಪಾತ್ ಮೇಲೆ ಹರಿಸಿ ಕಾರಿನಿಂದ ಬಿಡಿಸಿಕೊಳ್ಳಲು ಪ್ರಯತ್ನ ಪಟ್ಟಿದು ಯಶ್ವಸಿಯಾಗಿದ್ದಾರೆ.

Ad Widget . Ad Widget .

ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ. ಇಲ್ಲದಿದ್ರೆ ಬಸ್ ಸಹ ಸಂಪೂರ್ಣ ಬೆಂಕಿಗಾಹುತಿಗೆ ಒಳಗಾಗುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಚಂದ್ರಾಲೇಔಟ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Comment

Your email address will not be published. Required fields are marked *