ಸಮಗ್ರ ನ್ಯೂಸ್: ರೇವಂತ್ ರೆಡ್ಡಿ ಅವರನ್ನು ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿದೆ.
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 64 ಸ್ಥಾನಗಳ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಚುನಾವಣಾ ಫಲಿತಾಂಶ ಪ್ರಕಟ ಆದ ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು.
ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಮತ್ತು ವೀಕ್ಷಕರು ಸಿಎಂ ಹೆಸರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸುತ್ತಾರೆ ಎಂದು ಹೇಳಿದ್ದರು. ಇದೀಗ ಖರ್ಗೆ ರೇವಂತ್ ರೆಡ್ಡಿ ಹೆಸರನ್ನು ಘೋಷಣೆ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ 32,532 ಮತಗಳಿಂದ ಗೆದ್ದಿದ್ದು ಕಾಂಗ್ರೆಸ್ ಗೆಲುವಿನ ರೂವಾರಿ ಆಗಿ ಹೊರಹೊಮ್ಮಿದ್ದಾರೆ.
ರೇವಂತ್ ರೆಡ್ಡಿ ಅವರು ಜೂನ್ 2021 ರಲ್ಲಿ ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ತೊರೆದು ಕಾಂಗ್ರೆಸ್ಗೆ ಸೇರಿದ್ದರು.